KPSC ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದವರಿಗೆ ಅನ್ಯಾಯ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕ ಸೇವಾ ಆಯೋಗದ ವಿರುದ್ಧ ಕರವೇ ತಿರುಗಿ ಬಿದ್ದಿದೆ. ಕೆಪಿಎಸ್ಸಿ ಪರೀಕ್ಷೆ ಗಳಲ್ಲಿ ಆಗುವ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದಿದ್ದು,
ನಾರಾಯಣಗೌಡ ನೇತೃತ್ವದಲ್ಲಿ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಕರವೇ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಪ್ರತಿಭಟನೆ ನಡೆಸುತ್ತಿದೆ.
Blinkit Delivery: ಕೇವಲ 10 ನಿಮಿಷದಲ್ಲಿ ಆ್ಯಪಲ್ ಉತ್ಪನ್ನ ಡೆಲಿವರಿ ಮಾಡಲಿರುವ ಬ್ಲಿಂಕಿಟ್..!
ಕರವೇ ಅಧ್ಯಕ್ಷ ನಾರಾಯಣ ಗೌಡರ ನೇತೃತ್ವದಲ್ಲಿ ಗಾಂಧಿನಗರದ ಕರವೇ ಕೇಂದ್ರ ಕಚೇರಿಯಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ. 150 ಕ್ಕೂ ಹೆಚ್ಚು ಅಭ್ಯರ್ಥಿಗಳು ರಕ್ತದಲ್ಲಿ ಪತ್ರ ಬರೆದು ಕೆಪಿಎಸ್ಸಿ ವಿರುದ್ಧ ಹಂತ ಹಂತವಾಗಿ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.