ಹುಬ್ಬಳ್ಳಿ: ಬೆಳಗಾವಿಯಲ್ಲಿ ಆಯೋಜಿಸಿರುವ ಗಾಂಧಿ ಭಾರತ ಸಮಾವೇಶದಿಂದ ಭಯಭೀತಗೊಂಡಿರುವ ಬಿಜೆಪಿ, ಮುಡಾ ಹಗರಣದಲ್ಲಿ 300 ಕೋಟಿ ರೂ. ಸ್ಥಿರಾಸ್ತಿ ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಮೂಲಕ ಇಲ್ಲಸಲ್ಲದ ಆರೋಪ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಆರೋಪಿಸಿದ್ರು.
ಮುಡಾ ಹಗರಣ: 300 ಕೋಟಿ ಸ್ಥಿರಾಸ್ತಿ ಸೀಜ್ – ವಿರೋಧ ಪಕ್ಷಗಳು ಹಾಗು ಅಧಿಕಾರಿಗಳಿಗೂ ನಡುಕ.!
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಪ್ರಧಾನಿ ನರೇಂದ್ರ ಮೋದಿ ಇಡಿ ಯನ್ನು ರಾಜಕೀಯ ದ್ವೇಷಕ್ಕೆ ಬಳಸಿಕೊಂಡಿದ್ದಾರೆ ಎಂದರು. ದೆಹಲಿಯಲ್ಲಿ ಜನಪರ ಆಡಳಿತ ನೀಡುವಲ್ಲಿ ಆಮ್ ಆದ್ಮಿ ಪಕ್ಷ ವಿಫಲವಾಗಿದೆ. ಶೀಲಾ ದೀಕ್ಷಿ್ತ್ ಅವರು 15 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದಾಗ ದೆಹಲಿ ಯಲ್ಲಿ ಉತ್ತಮ ಆಡಳಿತ ನೀಡಿದ್ದರು. ಶೀಲಾ ದೀಕ್ಷಿತ್ ಮಾದರಿ ಆಡಳಿತವನ್ನು ಜನರು ಬಯಸುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದರು.