ಪಂಜಾಬ್ : ಅಮೃತಸರದ ಸ್ವರ್ಣಮಂದಿರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ರಾಡ್ನಿಂದ ಭಕ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಗೋಲ್ಡನ್ ಟೆಂಪಲ್ ಸಂಕೀರ್ಣದೊಳಗಿಮ ಸಮುದಾಯ ಅಡುಗೆಮನೆಯ ಬಳಿ ಇರುವ ಐತಿಹಾಸಿಕ ಗುರು ರಾಮ್ ದಾಸ್ ಸೆರೈನಲ್ಲಿ ನಡೆದಿದೆ. ಎಸ್ಜಿಪಿಸಿ ಭಕ್ತರು ಮತ್ತು ನೌಕರರ ಮೇಲೆ ಹರಿಯಾಣದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಐದು ಜನರು ಗಾಯಗೊಂಡಿದ್ದಾರೆ. ಈ ಘಟನೆ ಗೋಲ್ಡನ್ ಟೆಂಪಲ್ನ ಅಪರಿಚಿತ ವ್ಯಕ್ತಿಯೊಬ್ಬರು ಐದು ಜನರ ಮೇಲೆ ರಾಡ್ನಿಂದ ಹಲ್ಲೆ ನಡೆಸಿದ್ದು, ಎಲ್ಲರೂ ಗಾಯಗೊಂಡಿದ್ದಾರೆ.
ಇಂದು ಅಪರಿಚಿತ ವ್ಯಕ್ತಿಯೊಬ್ಬ ಕೋಲು ಹಿಡಿದು ಶ್ರೀ ಹರ್ಮಂದಿರ್ ಸಾಹಿಬ್ ಆವರಣಕ್ಕೆ ನುಗ್ಗಿ 5 ಭಕ್ತರ ಮೇಲೆ ಹಲ್ಲೆ ನಡೆಸಿದ್ದು, ಇದರಿಂದಾಗಿ ಅವರು ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ ಭಟಿಂಡಾದ ಸಿಖ್ ಯುವಕನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಹಲ್ಲೆ ಮಾಡಿದವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.