ಕಟಪಾಡಿ:– ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಬಳಿ ನಡೆದಿದೆ.
ಪೈಂಟರ್ ವೃತ್ತಿ ಮಾಡುತ್ತಿದ್ದ ಉತ್ತಮ (55) ಮೃತ ವ್ಯಕ್ತಿ ಎನ್ನಲಾಗುತ್ತಿದೆ.
ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುವನ್ನು ಸ್ಥಳೀಯರ ಸಹಕಾರದಿಂದ ಸಮಾಜ ಸೇವಕ ಕಟಪಾಡಿಯ ಅಭಿರಾಜ್ ಸುವರ್ಣ ತನ್ನ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.