ಬೀದರ್:; ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಬೀದರ್ ಬಂದ್ ಕರೆ ಕೊಡಲಾಗಿದೆ. ಹೀಗಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಲೋಕಾಯುಕ್ತ ದಾಳಿ ಕೇಸ್: ಅಕ್ರಮ ಆಸ್ತಿ ಕಂಡು ದಂಗಾದ ಅಧಿಕಾರಿಗಳು!
ವಿವಿಧ ದಲಿತ ಪರ ಸಂಘಟನೆಯಿಂದ ಬೀದರ್ ಬಂದ್ಗೆ ಕರೆ ನೀಡಿದ್ದು, ತಾಲೂಕಿನ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ದಲಿತಪರ ಸಂಘಟನೆಗಳಿಂದ ಬೀದರ್ ನಗರ ಬಂದ್ಗೆ ಕರೆ ನೀಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೀದರ್ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಉಪನಿರ್ದೇಶಕರು ಶಿಕ್ಷಣ ಇಲಾಖೆ ಡಿಡಿಪಿಐ ಎಸ್.ಎಲ್.ಪ್ರಸನ್ನ ಕುಮಾರ್ ಆದೇಶ ಹೊರಡಿಸಿದ್ದಾರೆ.