ನವದೆಹಲಿ: ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮತಿ ಹಾಗೂ ಹಣಕಾಸಿನ ನೆರವು ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ (D.K.Shivakumar) ಮನವಿ ಮಾಡಿದ್ದಾರೆ.
ಸಂಸತ್ ಭವನದಲ್ಲಿ ಬುಧವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದು, ಈ ಸಮಸ್ಯೆ ಬಗೆಹರಿಸಲು 60 ಕಿ.ಮೀ ಉದ್ದದ ನಗರ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ನಗರದೊಳಗೆ ಉತ್ತರದಿಂದ ದಕ್ಷಿಣ, ಪೂರ್ವದಿಂದ ಪಶ್ಚಿಮ ಕಾರಿಡಾರ್ ಮೂಲಕ ನಗರದೊಳಗಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮುಂದಾಗಿದ್ದೇವೆ.
Winter Health: ಚಳಿಗಾಲದಲ್ಲಿ ಗಂಟಲು ನೋವು, ಕೆಮ್ಮು ಸಮಸ್ಯೆಯೇ?: ಈ ವಸ್ತುಗಳನ್ನ ತಯಾರಿಸಿ ಟೀ ಕುಡಿದು ನೋಡಿ!
ಈ ಯೋಜನೆಯಲ್ಲಿ ಪ್ರತಿ ಕಿ.ಮೀ ಸುರಂಗ ರಸ್ತೆಗೆ 500 ರೂ.ನಂತೆ ಒಟ್ಟು 30 ಸಾವಿರ ಕೋಟಿ ವೆಚ್ಚ ತಗುಲುವ ಅಂದಾಜು ಮಾಡಲಾಗಿದೆ. ಈ ಯೋಜನೆಗಳು ರಾಷ್ಟ್ರೀಯ ಹೆದ್ದಾರಿ 7 ಮತ್ತು 4ರ ಸಂಪರ್ಕ ಸಾಧಿಸುವ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೆ ಕೇಂದ್ರ ಬಜೆಟ್ನಲ್ಲಿ ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಅನುದಾನ ಮೀಸಲಿಡಬೇಕು ಎಂದು ಮನವಿ ಮಾಡಿದರು.