ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಅಧಿಕಾರಿಗಳ ಸಭೆಯನ್ನು ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ನಲ್ಲಿ ನಡೆಸಲಾಯಿತು.
ಹೌದು.. ಅವಳಿನಗರದ ಹಾಗೂ ಧಾರವಾಡ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಜಿಲ್ಲಾಡಳಿತ ಹಾಗೂ ಪಾಲಿಕೆ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಚಿವ ಪ್ರಹ್ಲಾದ ಜೋಶಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.
ಇನ್ನೂ ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಶಾಸಕ ಅರವಿಂದ ಬೆಲ್ಲದ, ಶಾಸಕ ಎಂ.ಆರ್.ಪಾಟೀಲ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.