ಬೆಂಗಳೂರು:- ಅಪರಿಚಿತ ವಾಹನ ಡಿಕ್ಕಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆ ಆರ್ ಮಾರ್ಕೆಟ್ ಫ್ಲೈ ಓವರ್ ಮೇಲೆ ಜರುಗಿದೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ ಶಂಕರ್ ಎನ್ನಲಾಗಿದೆ. ಮಾರ್ಕೆಟ್ ನಿಂದ ಮೈಸೂರು ರಸ್ತೆ ಕಡೆ ಸವಾರ ತೆರಳ್ತಿದ್ದರು.
ಸಿಡ್ಕ್ ಅಗಿ ಬಿದ್ದಾಗ ತಲೆ ಮೇಲೆ ಮತ್ತೊಂದು ವಾಹನ ಹರಿದಿದೆ. ಈ ವೇಳೆ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವಾಹನ ಪತ್ತೆಗೆ ಪೊಲೀಸರ ತನಿಖೆ ಮುಂದುವರಿದಿದೆ.