ಬೆಂಗಳೂರು/ಮುಂಬೈ:- ಮುಂಬೈ ಬೆಂಗಳೂರು ವಿಮಾನ ಸೇರಿ ಮತ್ತೆ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಎಣ್ಣೆ ಹೊಡೆಯೋದಕ್ಕೆ ದುಡ್ಡಿಲ್ಲ ಅಂತ ಕಳ್ಳತನ: ಖಾಕಿ ಬಲೆಗೆ ಬಿದ್ದ ಖತರ್ನಾಕ್ ಮನೆಗಳ್ಳ!
ಮುಂಬೈಯಿಂದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನವೂ ಸೇರಿದಂತೆ ಇಂಡಿಗೋ, ವಿಸ್ತಾರ ಏರ್ಲೈನ್ಸ್, ಏರ್ ಇಂಡಿಯಾದ ಸುಮಾರು 30 ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿವೆ. 10 ಇಂಡಿಗೋ, 10 ವಿಸ್ತಾರ ವಿಮಾನಗಳಿಗೆ ಬೆದರಿಕೆ ಸಂದೇಶ ಬಂದಿವೆ.
ಈ ಸಂಬಂಧ ವಿಸ್ತಾರ ಏರ್ಲೈನ್ಸ್ ಪ್ರಕಟಣೆ ಹೊರಡಿಸಿದ್ದು, ಅಕ್ಟೋಬರ್ 21 ರಂದು ಕೆಲವು ವಿಸ್ತಾರಾ ವಿಮಾನಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಭದ್ರತಾ ಬೆದರಿಕೆ ಸಂದೇಶಗಳು ಬಂದಿವೆ. ನಾವು ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ನೀಡಿದ್ದೇವೆ ಮತ್ತು ಅವರು ಎಲ್ಲಾ ಸುರಕ್ಷತಾ ಕಾರ್ಯವಿಧಾನಗಳನ್ನು ಅನುಸರಿಸಿದ್ದಾರೆ. ನಮ್ಮ ಗ್ರಾಹಕರು, ಸಿಬ್ಬಂದಿ ಮತ್ತು ವಿಮಾನಗಳ ಸುರಕ್ಷತೆ ನಮಗೆ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದೆ.
6E-63 ದೆಹಲಿ – ಜೆಡ್ಡಾ, 6E-12 ಇಸ್ತಾಂಬುಲ್ – ದೆಹಲಿ, 6E-83 ದೆಹಲಿ – ದಮ್ಮಾಮ್, 6E-65 ಕೋಜಿಕೋಡ್ – ಜೆಡ್ಡಾ, 6E-67 ಹೈದರಾಬಾದ್ – ಜೆಡ್ಡಾ, 6E-77 ಬೆಂಗಳೂರು – ಜೆಡ್ಡಾ, 6E-18 ಇಸ್ತಾಂಬುಲ್ – ಮುಂಬೈ, 6E-164 ಮಂಗಳೂರು – ಮುಂಬೈ, 6E-118 ಲಕ್ನೋ ಅಹಮದಾಬಾದ್ ಸೇರಿದಂತೆ ಸುಮಾರು 30 ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ