ಚಳ್ಳಕೆರೆ: ತಾಲೂಕಿನ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಲವೇಹಳ್ಳಿ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದ್ದು, ಗ್ರಾಮದಲ್ಲಿ ದಲಿತರಿಗೆ ಕ್ಷೌರಿಕರು ಕ್ಷೌರ ಮಾಡುತ್ತಿಲ್ಲ ಸರ್ಕಾರಿ ನ್ಯಾಯ ಬೆಲೆ ಅಂಗಡಿಯಲ್ಲಿ, ಪಡಿತರ ಆಹಾರ ಧಾನ್ಯ ವಿತರಣೆ ಮಾಡುವಲ್ಲಿಯೂ, ತಾರತಮ್ಯ ಮಾಡುತ್ತಿದ್ದು, ಕೂಡಲೇ, ಸಂಬಂಧಪಟ್ಟ ಅಧಿಕಾರಿಗಳು ಇದನ್ನು ತಡೆಗಟ್ಟಿ ಗ್ರಾಮದಲ್ಲಿ ಸಮಾನತೆಯ ಬಗ್ಗೆ ಜಾಗೃತಿ ಮೂಡಿಸಬೇಕೆಂದು ದಲಿತ ಮುಖಂಡರು ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
ಇದೇ ವೇಳೆ,ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಟಿ. ವಿಜಯಕುಮಾರ್ ಮಾತನಾಡಿ, ಶತ ಶತಮಾನಗಳಿಂದ ಅಸ್ಪೃಶ್ಯತೆ ಜೀವಂತವಾಗಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ. ಅದರಲ್ಲೂ, ಕಾಲುವೆಹಳ್ಳಿ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದು ತಾಲೂಕು ಆಡಳಿತ ವರ್ಗ ಕ್ಕೆ ಆಗಿರುವ ಅವಮಾನ ಇದನ್ನು ನಾನು ಖಂಡಿಸುತ್ತೇನೆ. ಅಲ್ಲದೆ, ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲೂ ಪಡಿತರ ಆಹಾರ ವಿತರಣೆ ಮಾಡುವಲ್ಲಿ ತಾರತಮ್ಯ ಮಾಡುತ್ತಿದ್ದು,
ರೈತರಿಗೆ ಕೇಂದ್ರದಿಂದ ಮತ್ತೊಂದು ಬಂಪರ್ ಯೋಜನೆ! ಶೇಕಡಾ 50 ರಷ್ಟು ಸಬ್ಸಡಿ ಘೋಷಿಸಿದ ಸರ್ಕಾರ
ದಲಿತರಿಗೆ ಸುಮಾರು 10 ಅಡಿ ದೂರದಿಂದ ಪಡಿತರ ಧಾನ್ಯ ವಿತರಣೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ತಾಲೂಕ ಆಡಳಿತ ಎಚ್ಚರವಹಿಸಿ, ದಲಿತರು ಸ್ವತಂತ್ರವಾಗಿ ಸಮಾನತೆಯಿಂದ ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ, ತಾಲೂಕು ಆಡಳಿತ ವರ್ಗ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ದಂಡಾಧಿಕಾರಿ ರಹಮಾನ್ ಪಾಷಾ ಅವರಿಗೆ ಮನವಿ ಸಲ್ಲಿಸಿದರು. ಇದೆ ವೇಳೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು.