ಮಂಡ್ಯ :- ಮದ್ದೂರು ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆರಿಸುವ ಸಂಬಂಧ ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಚರ್ಚಿಸಲಾಗಿದ್ದು, ಹಂತ ಹಂತವಾಗಿ ಸರ್ಕಾರಿ ಆಸ್ಪತ್ರೆಗಳನ್ನು ಉನ್ನತಿಕರಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.
ಸೂರಜ್ ವಿರುದ್ಧದ ಲೈಂಗಿಕ ದೌರ್ಜನ್ಯ ಕೇಸ್.. ನನ್ನ ಯಾಕ್ರೀ ಪ್ರಶ್ನೆ ಮಾಡ್ತೀರಿ ಎಂದ ಕುಮಾರಸ್ವಾಮಿ..!
ಮದ್ದೂರು ಪಟ್ಟಣದ ಶ್ರೀ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಆರೋಗ್ಯ ಕವಚ ಯೋಜನೆಯಡಿ ನೀಡಿರುವ 108 ತುರ್ತು ಚಿಕಿತ್ಸಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಸಿಬ್ಬಂದಿ ಹಾಗೂ ಸೌಲಭ್ಯಗಳ ಕೊರತೆ ಇರುವುದು ನನ್ನ ಗಮನಕ್ಕೆ ಬಂದಿದ್ದು, ಇಲ್ಲಿನ ಸಮಸ್ಯೆಗಳನ್ನು ಬಗೆ ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಶೀಘ್ರವಾಗಿ ಸಮಸ್ಯೆಗಳು ಈಡೇರಲಿವೆ ಎಂದರು.
ಬೆಸಗರಹಳ್ಳಿ ಪ್ರಾಥವಿಕ ಆರೋಗ್ಯ ಕೇಂದ್ರ ಸೇರಿದಂತೆ ಇನ್ನು ಹಲವಾರು ಆಸ್ಪತ್ರೆಗಳನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸುವ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಗತಿ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಜನರಿಗೂ ಉತ್ತಮ ಚಿಕಿತ್ಸೆ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ ಬಿ.ಗೌಡ, ಆರೋಗ್ಯ ನಿರೀಕ್ಷಕ ತಮ್ಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಟಿಎಪಿಎಂಎಸ್ ಉಪಾಧ್ಯಕ್ಷ ಗೊರವನಹಳ್ಳಿ ರಾಘವ, ಪುರಸಭಾ ಸದಸ್ಯರಾದ ಎಂ.ಬಿ.ಸಚಿನ್, ಮನೋಜ್, ಸರ್ವಮಂಗಳ, ಕೋಕಿಲಾ ಅರುಣ್, ಸಿದ್ದರಾಜು, ಮುಖಂಡರಾದ ಅವಿನಾಶ್, ಸಂತೋಷ್, ಜಯಪ್ರಕಾಶ್, ವೆಂಕಟೇಶ್ ಸೇರಿದಂತೆ ಇತರರು ಇದ್ದರು.