ಬೆಳಗಾವಿ:- ನಗರದ ಅಳ್ವಾನ್ ಗಲ್ಲಿಯಲ್ಲಿ ನಡೆದಿದೆ. ಸಧ್ಯ ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದೆ. ಕ್ರಿಕೆಟ್ ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಬಳಿಕ ಹಿಂದೂ ಸಮುದಾಯದ ಮನೆಗಳ ಮೇಲೆ ಕಲ್ಲು ತೂರಿ, ತಲ್ವಾರ್ ಪ್ರದರ್ಶನ ಮಾಡಿದ ಘಟನೆ ಎನ್ನಲಾಗಿದೆ.
ಬೆಳಗಾವಿಯಲ್ಲಿ ಮಳೆ ಆರ್ಭಟ..ಸಿಡಿಲಿಗೆ ಇಬ್ಬರು ಬಲಿ, 6 ಜನರ ಸ್ಥಿತಿ ಗಂಭೀರ… !
ಇನ್ನೂ ಸಂಜೆ ಐದು ಗಂಟೆ ಸುಮಾರಿಗೆ ಚಿಕ್ಕ ಮಕ್ಕಳ ನಡುವೆ ಕ್ರಿಕೆಟ್ ವಿಚಾರದಲ್ಲಿ ಗಲಾಟೆಯಾಗಿದೆ. ಬಳಿಕ ಇದರಲ್ಲಿ ಎರಡು ಗುಂಪಿನ ಯುವಕರು ಮಧ್ಯಪ್ರವೇಶಿಸಿದ್ದು, ದೊಡ್ಡಮಟ್ಟದ ಘರ್ಷಣೆ ಉಂಟಾಗಿದೆ. ಈ ನಡುವೆ ಅಬ್ದುಲ್ ಎಂಬಾತ ನಡು ರಸ್ತೆಯಲ್ಲಿ ತಲ್ವಾರ್ ಪ್ರದರ್ಶನ ಮಾಡಿದ್ದು, ಯುವಕರ ನಡುವಿನ ಗಲಾಟೆಯಲ್ಲಿ ಓರ್ವ ಪೊಲೀಸ್ ಪೇದೆ ಸೇರಿದಂತೆ ಎಂಟು ಜನರಿಗೆ ಗಾಯವಾಗಿದ್ದು, ಎರಡು ಕಡೆಯ ಗಾಯಾಳುಗಳಿಗೆ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ