ಬೆಂಗಳೂರು ;- ನಗರದಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಶೀಘ್ರವೇ ಆರಂಭವಾಗುತ್ತಿರುವುದು ಸಂತಸ ತಂದಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಉತ್ತಮ ಬೆಳವಣಿಗೆಯಾಗಿದ್ದು, ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಖ್ಯಾತಿಯನ್ನು ಹೆಚ್ಚಿಸಲಿದೆ ಎಂದು ಹೇಳಿದ್ದಾರೆ. ಇಷ್ಟು ದಿನ ವೀಸಾ ಅರ್ಜಿಗಳಿಗಾಗಿ ಬೆಂಗಳೂರಿಗರು ಚೆನ್ನೈ ಮತ್ತು ಹೈದರಾಬಾದ್‌ಗೆ ಪ್ರಯಾಣಿಸಬೇಕಾಗಿತ್ತು. ಈ ಬೆಳವಣಿಗೆ ಕರ್ನಾಟಕದ ಐಟಿ ಮತ್ತು ಐಟಿಇಎಸ್ ಉದ್ಯಮಗಳು, ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳಿಗೆ ಸಹಾಯ ಮಾಡಲಿದೆ ಎಂದು ತಿಳಿಸಿದ್ದಾರೆ.

ಇನ್ನೂ ಬೆಂಗಳೂರಿನಲ್ಲಿ ಅಮೆರಿಕಾ ತನ್ನ ರಾಯಭಾರ ಕಚೇರಿ ಆರಂಭಿಸುವಂತೆ ಮಾಡುವಂತೆ 2019ರ ಜುಲೈ.2 ರಂದು ಅಂದಿನ ರಾಜ್ಯ ಬಿಜೆಪಿ ವಕ್ತಾರ ಎ.ಎಚ್.ಆನಂದ್ ಅವರು ಅಂದಿನ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿವಿ ಸದಾನಂದ ಗೌಡ ಅವರಿಗೆ ಪತ್ರ ಬರೆದು ರಾಯಭಾರಿ ಕಚೇರಿ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮನವಿ ಮಾಡಿದ್ದರು.
