ಬೆಂಗಳೂರು :- ಕಣ್ಣು ಕುಕ್ಕುವ ಹೈ ಬೀಮ್ ಲೈಟ್ ಉಪಯೋಗಿಸುತ್ತಿದ್ದ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ನಾಟಕದಾದ್ಯಂತ ಈ ವಾರ ಅಂದರೆ ಜುಲೈ 01ರಿಂದ ಜುಲೈ 7ರ ವರೆಗೆ 8244 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ.
ಗೋಲ್ಡ್ ಪ್ರಿಯರಿಗೆ ಕೊಂಚ ನೆಮ್ಮದಿ ಸುದ್ದಿ: ಇಳಿಕೆ ಕಂಡ ಚಿನ್ನದ ಬೆಲೆ- ಇಲ್ಲಿದೆ ಇಂದಿನ ದರಪಟ್ಟಿ!
ರಾತ್ರಿ ವೇಳೆ ಹೈ ಬೀಮ್ ಲೈಟ್ ಉಪಯೋಗದಿಂದ ಅಪಘಾತ ಪ್ರಕರಣಗಳು ಹೆಚ್ಚಿವೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದಿರುವ ಪೊಲೀಸರು, ಹೀಗೆ ಹಾಕಿಕೊಂಡು ಚಲಾಯಿಸಿದವರ ವಿರುದ್ಧ ಕೇಸ್ ಜಡಿದಿದ್ದಾರೆ. ಈ ಮೂಲಕ ಹೈ ಬೀಮ್ ಎಲ್ ಇಡಿ ಹೆಡ್ ಲೈಟ್ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕ ಎನಿಸಿಕೊಂಡಿದೆ
ಕರ್ನಾಟಕದಲ್ಲಿ ಒಟ್ಟು 8244 ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಕ್ರಮ ಕೈಗೊಂಡ ಅಧಿಕಾರಿಗಳಿಗೆ, ಸಿಬ್ಬಂದಿಗೆ ಅಲೋಕ್ ಕುಮಾರ್ ಅವರು ಎಕ್ಸ್ನಲ್ಲಿ ಶ್ಲಾಘಿಸಿದ್ದಾರೆ.
ತೀಕ್ಷ್ಣ ಬೆಳಕು ಸೂಸುವಂಥ ಎಲ್ಇಡಿ ಲೈಟ್ಗಳನ್ನು ಅಳವಡಿಸಿದ ಅತಿಹೆಚ್ಚು ಪ್ರಕರಣಗಳು ಬೆಂಗಳೂರಿನ ನಗರ ಜಿಲ್ಲೆಯಲ್ಲೇ ಎನ್ನುವುದು ವರದಿಯಾಗಿವೆ. ನಗರದಲ್ಲಿ ಏಳು ದಿನಗಳಲ್ಲಿ ಅಂದರೆ ಜುಲೈ 01 ರಿಂದ ಜುಲೈ 7ರ ವರೆಗೆ ಬರೋಬ್ಬರಿ 3354 ಕೇಸ್ ದಾಖಲಾಗಿವೆ. ನಂತರದ ಸ್ಥಾನಗಳಲ್ಲಿ ರಾಯಚೂರು (386, ಮೈಸೂರು ನಗರ (381), ಮಂಗಳೂರು ನಗರ (325) ಇವೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಈ ಪ್ರಕರಣ ದಾಖಲಾಗಿದೆ.