ಬೆಂಗಳೂರು:-ಮೋದಿ ಫೋಟೋ ಬಳಕೆ ಮಾಡಿದ ಹಿನ್ನೆಲೆ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಮೋದಿ ಫೋಟೋ ಬಳಕೆಗೆ ಬ್ರೇಕ್ ಹಾಕಲು ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ, ಛಲವಾದಿ ನಾರಾಯಣ ಸ್ವಾಮಿ ಹಾಗೂ ಪಿ ರಾಜೀವ್ ನೇತೃತ್ವದಲ್ಲಿ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ
MI V/s RCB: ಮುಂಬೈ ವಿರುದ್ಧದ ಪಂದ್ಯದಲ್ಲಿ ಬೆಂಗಳೂರು ತಂಡದಲ್ಲಿ ಮಹತ್ವದ ಬದಲಾವಣೆ!
ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ, ಶಿವಮೊಗ್ಗದಲ್ಲಿ ನಮ್ಮ ಅಭ್ಯರ್ಥಿಯಾಗಿ ರಾಘವೇಂದ್ರ ಅವರು ನಿಂತಿದ್ದಾರೆ. ಆದರೆ ಈಶ್ವರಪ್ಪ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲುತ್ತೇನೆ ಎಂದು ಹೇಳುತ್ತಿದ್ದಾರೆ. ಈಶ್ವರಪ್ಪ ಅವರು ಪ್ರಧಾನಿ ಮೋದಿ ಅವರ ಭಾವಚಿತ್ರ ಬಳಕೆ ಮಾಡುತ್ತಿದ್ದಾರೆ. ಹಾಗಾಗಿ ಇದರ ಬಗ್ಗೆ ಗಮನ ಹರಿಸಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ ಎಂದರು.
ಮೋದಿ ಅವರ ಹೆಸರನ್ನು ಕೂಡ ಬಳಕೆ ಮಾಡಬಾರದು. ಒಂದು ಪಕ್ಷದ ನಾಯಕರ ಹೆಸರನ್ನು ಆಗಲಿ ಬಳಸುವ ಹಾಗಿಲ್ಲ. ಅದಕ್ಕೆ ವಿರೋಧ ಮಾಡುತ್ತೇವೆ. ನಮ್ಮ ಪಕ್ಷದ ಲೀಡರ್ಗಳ ಹೆಸರನ್ನು ಬಳಸಬಾರದು. ಪ್ರಧಾನ ಮಂತ್ರಿಗಳ ಪೋಟೋ ಆಗಲಿ, ಹೆಸರು ಆಗಲಿ ಬಳಕೆ ಮಾಡಬಾರದು. ನಾವೇನು ಪಕ್ಷದಿಂದ ಅವರನ್ನು ವಜಾ ಮಾಡಿಲ್ಲ ವಿತ್ ಡ್ರಾ ಮಾಡಿಕೊಂಡು ಪಕ್ಷಕ್ಕಾಗಿ ಕೆಲಸ ಮಾಡಿ ಎಂದು ಹೇಳಿದರು.