ಪುಣೆ: ಬಲಪ್ರಯೋಗ ಮತ್ತು ಇತರರ ದೇವರನ್ನು ಅವಮಾನಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಆರ್ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಪುಣೆಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಸಂಭಾಲ್ನ ಶಾಹಿ ಜಾಮಾ ಮಸೀದಿ ಮತ್ತು ರಾಜಸ್ಥಾನದ ಅಜ್ಮೀರ್ ಷರೀಫ್ನಂತಹ ಧಾರ್ಮಿಕ ಸ್ಥಳಗಳ ಮೂಲದ ಬಗ್ಗೆ ಇತ್ತೀಚಿನ ವಿವಾದಗಳ ಹಿನ್ನೆಲೆಯಲ್ಲಿ ಅವರು ಈ ರೀತಿ ಹೇಳಿದ್ದಾರೆ. ಭಾರತದಲ್ಲಿ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಎಂಬುದಿಲ್ಲ, ಎಲ್ಲರೂ ಒಂದೇ ಎಂದು ಹೇಳಿದರು.
Long Pepper: ಹಿಪ್ಪಲಿಯ ಔಷಧೀಯ ಗುಣಗಳ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗೋದು ಗ್ಯಾರಂಟಿ.!?
ತಮ್ಮ ತಪ್ಪುಗಳಿಂದ ಭಾರತೀಯರು ಪಾಠ ಕಲಿಯಬೇಕು, ವಿವಾದಾತ್ಮಕ ವಿಷಯಗಳನ್ನು ತಪ್ಪಿಸುವ ಮೂಲಕ ಒಳ್ಳೆಯತನಕ್ಕೆ ಮಾದರಿಯಾಗಬೇಕು. ಉಗ್ರವಾದ, ಆಕ್ರಮಣಶೀಲತೆ, ಬಲಪ್ರಯೋಗ ಮತ್ತು ಇತರರ ದೇವರನ್ನು ಅವಮಾನಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಒತ್ತಿ ಹೇಳಿದರು. ಈ ದೇಶದಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಪೂಜಾ ವಿಧಾನವನ್ನು ಅನುಸರಿಸುತ್ತಾರೆ. ಭಾರತ ವಿಶ್ವಕ್ಕೆ ಮಾದರಿಯಾಗಬೇಕು, ವಿಭಿನ್ನ ಧರ್ಮಗಳು ಮತ್ತು ಸಿದ್ಧಾಂತಗಳು ವಿವಾದಗಳಿಲ್ಲದೆ ಹೇಗೆ ಒಟ್ಟಿಗೆ ಬದುಕುತ್ತವೆ ಎಂಬುದನ್ನು ನಾವು ತೋರಿಸಬೇಕು ಎಂದು ಭರವಸೆಯ ಮಾತುಗಳನ್ನಾಡಿದರು.