ತುಮಕೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಹತಾಶೆ, ಬಿಜೆಪಿ ರಾಜ್ಯಾಧ್ಯಕ್ಷ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಇಂದು (ಶನಿವಾರ) ಸಿದ್ದಗಂಗಾ ಮಠಕ್ಕೆ (Siddaganga Matt) ತೆರಳಿ ಶ್ರೀಗಳನ್ನು ಭೇಟಿಯಾದರು. ಶ್ರೀಗಳ ಮುಂದೆ ಸೋಮಣ್ಣ (V.Somanna) ಚುನಾವಣಾ ಸೋಲಿನ ನೋವು ತೋಡಿಕೊಂಡರು.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಸೋಲಿನ ಬೇಸರವನ್ನು ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಬಳಿ ಹಂಚಿಕೊಂಡಿದ್ದಾರೆ. “ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧವಾಯ್ತು. ಕೇಂದ್ರ ಗೃಹ ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು. ಎರಡು ಗಂಟೆ ಮನೆಯಲ್ಲಿ ಕುಳಿತುಕೊಂಡಿದ್ದರು, ಆಗಲ್ಲ ಅಂತಾ ಹೇಳಿದ್ದೆ. ಪ್ರಧಾನಿ ಮೋದಿಯವರು ದೆಹಲಿಗೆ ಕರೆಸಿ ನೀನು ಸ್ಪರ್ಧೆ ಮಾಡು ಅಂದರು, ಏನ್ಮಾಡಲಿ” ಎಂದು ಬೇಸರ ವ್ಯಕ್ತಪಡಿಸಿದರು.
ಈ ಮೂಲಕ ತಾವು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾರಣವೇನು ಎಂಬುವುದರ ಹಿಂದಿನ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ.