ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಸೋಮಣ್ಣ ಅವರಿಗೆ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಕಾಂಗ್ರೆಸ್ ಸೇರ್ತಾರಾ ಅನ್ನೋ ಚರ್ಚೆಗಳು ಮತ್ತೆ ಮುನ್ನಲೆಗೆ ಬಂದಿವೆ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿಯೂ ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಕುರಿತು ಸಾಕಷ್ಟು ಚರ್ಚೆಯಾಗಿತ್ತು. ಅದು ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ವಿ ಸೋಮಣ್ಣ ಇರುವ ಪೋಟೋ ಇದೀಗ ಸಾಮಾಜಿಕ ಜಾಲತಾಣಗಳಿಂದ ವೈರಲ್ ಆಗಿತ್ತು.
ಇನ್ನೂ ರಾಜ್ಯಾಧ್ಯಕ್ಷ ಸ್ಥಾನ ಕೈ ತಪ್ಪಿದ ಹಿನ್ನಲೆ ಬೇಸರಗೊಂಡಿರುವ ಸೋಮಣ್ಣ ವಿಜಯೇಂದ್ರೆ ಹೆಸರು ಘೋಷಣೆ ಬಳಿಕ ಮೌನಕ್ಕೆ ಜಾರಿರುವ ನವೆಂಬರ್ 17ರಂದು ಸುದ್ದಿಗೋಷ್ಠಿ ನಡೆಸೋದಾಗಿ ಮಾಹಿತಿ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಆಪರೇಷನ್ ಹಸ್ತದಡಿ ವಿ ಸೋಮಣ್ಣ ಅವರನ್ನು ಪಕ್ಷಕ್ಕೆ ಕರೆತರಲು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ಗೆ ಹಳೇ ಮೈಸೂರು ಭಾಗದಲ್ಲಿ ವೀರಶೈವ ಲಿಂಗಾಯತ ನಾಯಕರ ಕೊರತೆ ಇದೆ. ವಿ.ಸೋಮಣ್ಣ ಅವರನ್ನು ಕರೆತಂದು ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಅಂಗಳದಲ್ಲಿ ಚಿಂತನೆ ನಡೆದಿದೆ ಎನ್ನಲಾಗಿದೆ
ತುಮಕೂರಿನ ವೀರಶೈವ-ಲಿಂಗಾಯತ ಮುಖಂಡರು, ಮಠಮಾನ್ಯಗಳ ಜೊತೆ ಉತ್ತಮ ಒಡನಾಟದಲ್ಲಿರೋ ವಿ.ಸೋಮಣ್ಣ ಕ್ಷೇತ್ರದಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ.
ಬಿಜೆಪಿಯಿಂದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡಗೆ ಟಿಕೆಟ್ ನೀಡುವ ಸಾಧ್ಯತೆಗಳಿವೆ. ಹಾಲಿ ಸಂಸದ ಜಿಎಸ್ ಬಸವರಾಜ್ ಅವರಿಗೆ ಕೊಕ್ ನೀಡೋ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮೈತ್ರಿ ಸೂತ್ರದಡಿ ಜೆಡಿಎಸ್ಗೆ ಕ್ಷೇತ್ರ ಬಿಟ್ಟುಕೊಟ್ರೆ ಒಕ್ಕಲಿಗ ಅಥವಾ ಹಿಂದುಳಿದ ಅಭ್ಯರ್ಥಿ ಕಣಕ್ಕಿಳಿಸಲು ದಳಪತಿಗಳು ಮುಂದಾಗಬಹುದು.
ವಿಧಾನಸಭಾ ಚುನಾವಣೆಗೂ ಮುನ್ನ ಮತ್ತು ಫಲಿತಾಂಶದ ನಂತರ ಸೋಮಣ್ಣ ಬಿಜೆಪಿ ತೊರೆಯುತ್ತಾರೆ ಎಂದು ಮಾತುಗಳು ಕೇಳಿ ಬಂದಿದ್ದವು. ಆದ್ರೆ ನಾನು ಪಕ್ಷ ತೊರೆಯಲ್ಲ ಎಂದು ಹೇಳಿದ್ದರು. ಇದೀಗ ಮತ್ತೆ ಆ ಚರ್ಚೆಗಳು ಮುನ್ನಲೆಗೆ ಬಂದಿವೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕರು ಸೋಮಣ್ಣ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.