ಬೆಂಗಳೂರು: ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಜ್ ನೀರು, ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂಬುವುದು ಸುಳ್ಳು ಸುದ್ದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ರೀತಿಯ ಸುದ್ದಿ ಸುಳ್ಳಾಗಿದ್ದು,
Not true. No such circular has been issued from @DHFWKA. https://t.co/tNp8w5cQPn
— K'taka Health Dept (@DHFWKA) May 3, 2024
ಇಂತಹ ಯಾವುದೇ ಸುತ್ತೋಲೆ ಇಲಾಖೆ ಹೊರಡಿಸಿಲ್ಲ. ಗಾಬರಿ ಗೊಳ್ಳದಿರಿ, ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ರೀತಿ ಸೂಚನೆ ನೀಡಿರುವ ಕಾಲೇಜುಗಳಿಗೆ ಕಾರಣ ಕೇಳಿ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.
ಸುಳ್ಳು ಸುದ್ದಿ
ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್ ನೀರು, ಐಸ್ ಕ್ರೀಮ್ ಮತ್ತಯ ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ.
Car airbags: ನಿಮ್ಮ ಕಾರಿನಲ್ಲಿರುವ ಏರ್ʼಬ್ಯಾಗ್ ಅಸಲಿಯೋ, ನಕಲಿಯೋ ತಿಳಿಯುವುದೇಗೆ ಗೊತ್ತಾ..? ಈ ಸ್ಟೋರಿ ನೋಡಿ
ಹೀಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಎಂದು ಖಾಸಗಿ ಕಾಲೇಜು ಸುತ್ತೋಲೆ ಹೊರಡಿಸಿತ್ತು.ಖಾಸಗಿ ಕಾಲೇಜೊಂದು ಈ ರೀತಿಯಾಗಿ ನೋಟಿಸ್ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರದಾಡಲು ಆರಂಭಿಸಿತು. ಇದರಿಂದ ಎಚ್ಚತ್ತ ಆರೋಗ್ಯ ಇಲಾಖೆ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.