ಬೆಂಗಳೂರು: ಕೋವಿಡ್ ಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬುದರ ಕುರಿತು ಜನರು ಭಯ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ” ಕೆಲವರಿಗೆ ಅಡ್ಡ ಪರಿಣಾಮಗಳು ಆಗಿರುವ ಬಗ್ಗೆ ಮಾಹಿತಿ ಇದೆ. ಲಸಿಕೆ ಎಂದ ಮೇಲೆ ಸಣ್ಣ ಪ್ರಮಾಣದ ಸೈಡ್ ಎಫೆಕ್ಟ್ ಇರುತ್ತೆ. ಆದರೆ ಜನರು ಏನೋ ಆಗಿಬಿಡುತ್ತೆ ಎಂದು ಭಯಪಡಬಾರದು ” ಎಂದು ಹೇಳಿದರು.
ಕರ್ನಾಟಕದಲ್ಲಿ ಕೋವಿಡ್ ಶೀಲ್ಡ್ ಲಸಿಕೆ ಪಡೆದವರಲ್ಲಿ ಬೆರಳಣಿಕೆಯಷ್ಟು ಜನರಿಗೆ ಮಾತ್ರ ಗಂಭೀರ ಆರೋಗ್ಯ ಸಮಸ್ಯೆಗಳು ಕಂಡುಬಂದಿದೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಪರಿಶೀಲನೆ ನಡೆಸಲಾಗಿದೆ. ನಾಲ್ಕು ಐದು ಜನರಿಗೆ ವ್ಯಾಕ್ಸಿನ್ ಪಡೆದ ಬಳಿಕ ಗಂಭೀರ ಆರೋಗ್ಯ ಸಮಸ್ಯೆ ಎದುರಿಸಿರುವ ಬಗ್ಗೆ ಮಾಹಿತಿ ಇದೆ. ಆದರೆ ಇದು ಲಸಿಕೆಯಿಂದಲೇ ಆಗಿದೆಯಾ ಅಥವಾ ಬೇರೆ ಅರೋಗ್ಯದ ಸಮಸ್ಯೆಗಳು ಕೂಡ ಕಾರಣವಾ ಎಂಬುದನ್ನ ನೋಡಬೇಕು ಎಂದರು.
ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು..
ಕೋವಿಡ್ ಶೀಲ್ಡ್ ವಾಕ್ಸಿನ್ ಪಡೆದವರೆಲ್ಲರಿಗೂ ಆರೋಗ್ಯ ತೊಂದರೆಗಳಾಗುತ್ತವೆ ಎಂದು ಭಯ ಪಡುವ ಅಗತ್ಯವಿಲ್ಲ. ಏನೋ ಆಗಿಬಿಡಿತ್ತೆ ಎಂದು ಸಾರ್ವತ್ರಿಕವಾಗಿ ಭಯದ ವಾತವಾರಣ ಸೃಷ್ಟಿಯಾಗುತ್ತಿರುವುದನ್ನ ಗಮನಿಸಿದ್ದೇನೆ. ಆದರೆ, ಈಗಾಗಲೇ ವ್ಯಾಕ್ಸಿನ್ ಪಡೆದು ಎರಡು ವರ್ಷಗಳು ಕಳೆದು ಹೋಗಿವೆ. ಹೀಗಿರುವಾಗ ಈಗ ಅಷ್ಟೊಂದು ಅಡ್ಡಪರಿಣಾಮ ಆಗಲ್ಲ ಎಂಬ ಅಭಿಪ್ರಾಯಗಳು ಕೂಡ ಇದೆ ಎಂದು ತಿಳಿಸಿದರು.