ಬೆಂಗಳೂರು:- ಬೆಂಗಳೂರು: ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ವಿಶೇಷ ಪೂಜೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಭಕ್ತರ ಸಾಗರ ಹರಿದು ಬರುತ್ತಿದೆ.
ರಾಜ್ಯಾದ್ಯಂತ ಸಾವಿರಾರು ದೇಗುಲದಲ್ಲಿ ಪಂಚಾಭಿಷೇಕ, ಪುಷ್ಪಭಿಷೇಕ ಸೇರಿದಂತೆ ವಿವಿಧ ಪೋಜೆ ನಡೆಯುತ್ತಿದ್ದು, ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಇನ್ನೂ ಬೆಂಗಳೂರಿನ ದೇವಸ್ಥಾನಗಳಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತಿದ್ದು, ಇಸ್ಕಾನ್ನಲ್ಲಿ ರಾತ್ರಿ 11 ಗಂಟೆ ವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಶುಭ ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ಅಪಾರ ಸಂಖ್ಯೆಯಲ್ಲಿ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ಭಕ್ತರು ತೆರಳುತ್ತಿದ್ದಾರೆ. ಪ್ರಮುಖವಾಗಿ, ಬೆಂಗಳೂರಿನ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ಭೇಟಿ ನೀಡುತ್ತಿದ್ದಾರೆ.
ಇಸ್ಕಾನ್ ದೇವಸ್ಥಾನದಲ್ಲಿ ನಸುಕಿನ ಜಾವ 3:45ರಿಂದಲೇ ವಿಶೇಷ ಪೂಜೆ, ಅಭಿಷೇಕ, ಲಕ್ಷ್ಮಿ ವೆಂಕಟೇಶ್ವರನಿಗೆ ವಿಶೇಷ ಮಂಗಳರಾತಿ ನೆರವೇರಿಸಲಾಗುತ್ತಿದೆ. ದರ್ಶನಕ್ಕೆ ಬರುವ ಜನರಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಪೂಜೆ ಬಳಿಕ ಭಕ್ತಾದಿಗಳಿಗೆ ಲಡ್ಡು, ಪೊಂಗಲ್ ವಿತರಣೆ ಮಾಡಲಾಗುತ್ತಿದೆ.
ಇನ್ನೂ ಇಂದು ರಾತ್ರಿ 11 ಗಂಟೆ ವರೆಗೂ ಇಸ್ಕಾನ್ ದೇವಸ್ಥಾನದಲ್ಲಿ ಭಕ್ತರಿಗೆ ಮುಕ್ತವಾಗಿ ದರ್ಶನ ಸಿಗಲಿದೆ ಇಸ್ಕಾನ್ ಆಡಳಿತ ಮಂಡಳಿ ತಿಳಿಸಿದೆ.