ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಮಗದಲ್ಲಿ ನಡೆದಿರುವ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನನ್ನ ಯಾವುದೇ ಪಾತ್ರ ಇಲ್ಲ ಎಂದಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಈ ಸಂಬಂಧ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಸಾಕ್ಷ್ಯ ನಾಶದ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಯಾವುದೇ ತನಿಖೆಗೂ ಸಿದ್ಧ ಎಂದು ಬಹಿರಂಗ ಸವಾಲು ಹಾಕಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
Muskmelon Seeds: ಕರ್ಬೂಜ ಹಣ್ಣಿನ ಬೀಜಗಳಿಂದ ಎಷ್ಟೆಲ್ಲಾ ಅದ್ಭುತ ಪ್ರಯೋಜನಗಳಿವೆ ಗೊತ್ತಾ..?
ಮೇ 24ರಂದು ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಯಲ್ಲಿ ನಾನು, ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಸವರಾಜ್ ದದ್ದಲ್ ಸೇರಿದಂತೆ ಕೆಲವರು ಸಭೆ ನಡೆಸಿ ಸಾಕ್ಷ್ಯ ನಾಶ ಮಾಡಿದ್ದೇವೆ ಆರೋಪ ಕೇಳಿಬಂದಿದೆ. ವಾಸ್ತವವಾಗಿ ಮೇ 24ರಂದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ,
ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ನಾನು ಕಚೇರಿಗೆ ಭೇಟಿ ನೀಡಿರಲಿಲ್ಲ. ಆದರೂ ನಾನು ಕಚೇರಿಯಲ್ಲಿ ಇದ್ದೆ ಎಂದರೆ, ಇದಕ್ಕಿಂತ ಅಪಹಾಸ್ಯ ಇನ್ನೇನಿದೆ ಎಂದು ತಮ್ಮ ಮೇಲಿನ ಆರೋಪಗಳನ್ನು ಸಾರಸಗಟಾಗಿ ತಳ್ಳಿ ಹಾಕಿದರು. ಅಲ್ಲದೆ ಯಾವುದೇ ತನಿಖೆಯನ್ನು ಕಾನೂನುಬದ್ದವಾಗಿ ಎದುರಿಸಲು ಸಿದ್ದನಿದ್ದೇನೆ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)