ಬೆಂಗಳೂರು:- ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧ ವರದಿಯನ್ನು ED ಸಲ್ಲಿಸಿದೆ.
ದರ್ಶನ್ ಪರ ವಕೀಲರಿಗೆ SPP ಕೌಂಟರ್: ಜಡ್ಜ್ ಮುಂದೆ ಎಳೆಎಳೆಯಾಗಿ ಡಿ ಗ್ಯಾಂಗ್ ರಕ್ತ ಚರಿತ್ರೆ ಮುಂದಿಟ್ಟ ವಕೀಲರು!
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಇಡಿ ಮಾಹಿತಿ ಹಂಚಿಕೊಂಡಿದ್ದು, ಇಡಿ ಸಲ್ಲಿಸಿರುವ ವರದಿಯನ್ನು ವಿಶೇಷ ಕೋರ್ಟ್ ಪರಿಜ್ಞಾನಕ್ಕೆ ಪಡೆದುಕೊಂಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರರ ತಲೆದಂಡವೂ ಆಗಿತ್ತು. ಇತ್ತೀಚೆಗೆ ಇಡಿ ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಕೂಡ ಸಲ್ಲಿಕೆ ಮಾಡಿತ್ತು. ಅದರಲ್ಲಿ ಪ್ರಕರಣದ ಮಾಸ್ಟರ್ ಮೈಂಡ್ ಮಾಜಿ ಸಚಿವ ಬಿ.ನಾಗೇಂದ್ರರೇ ಆಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿತ್ತು.
ಮಾಜಿ ಸಚಿವ ಬಿ.ನಾಗೇಂದ್ರ ಮೇಲೆ ಆರೋಪ ಹೊರಿಸಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿತ್ತು. ಚಾರ್ಜ್ಶೀಟ್ನಲ್ಲಿ ಬಿ.ನಾಗೇಂದ್ರನೇ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಉಲ್ಲೇಖ ಮಾಡಲಾಗಿತ್ತು. ಚಾರ್ಜ್ಶೀಟ್ನಲ್ಲಿ ವಾಲ್ಮೀಕಿ ನಿಗಮ ಹಗರಣದ ಸಂಪೂರ್ಣ ಮಾಹಿತಿ ಉಲ್ಲೇಖ ಮಾಡಲಾಗಿತ್ತು. ಸತ್ಯನಾರಾಯಣ ವರ್ಮಾ ಜತೆ ನಿಕಟ ಸಂಪರ್ಕ, ಹಣದ ಬಗ್ಗೆಯೂ ಉಲ್ಲೇಖಿಸಿಲಾಗಿತ್ತು
ನಾಗೇಂದ್ರ ಸೂಚನೆಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ, 187 ಕೋಟಿ ರೂ. ವಾಲ್ಮೀಕಿ ಅವ್ಯವಹಾರದ ಪೈಕಿ 97.32 ಕೋಟಿ ರೂ. ವರ್ಗಾವಣೆ ಆಗಿತ್ತು. ನಿಗಮಕ್ಕೆ ಸೇರಿದ್ದ 12 ಕೋಟಿ ರೂ. ಹಣ ಲೋಕಸಭಾ ಚುನಾವಣೆಗೆ ಬಳಕೆಯಾಗಿರುವುದನ್ನು ಬಯಲಾಗಿತ್ತು. ಇನ್ನು ಬೆಂಗಳೂರು, ಬಳ್ಳಾರಿಯಲ್ಲಿ ಹಣ ಹಂಚಿಕೆ ಬಗ್ಗೆ ಚಾರ್ಜ್ಶೀಟ್ನಲ್ಲಿ ಉಲ್ಲೇಖ ಮಾಡಲಾಗಿತ್ತು. ಬಿ.ನಾಗೇಂದ್ರ ಸೇರಿ ಐವರ ವಿರುದ್ಧ ದೋಷಾರೋಪ ಪಟ್ಟಿಯನ್ನ ಸಲ್ಲಿಕೆ ಮಾಡಲಾಗಿತ್ತು.
ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿ ಅಧಿಕಾರಿಗಳು ಕೂಡ ಪ್ರತ್ಯೇಕ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.