ಬೆಂಗಳೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೋರ್ಟ್ಗೆ ಹಾಜರಾಗಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದರು. ಇದೇ ಸದಂರ್ಭದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಸಂಸತ್ ಚುನಾವಣೆಯಲ್ಲಿ ಸ್ಫರ್ಧೆ ಮಾಡಿದ್ದ ಸಂಸದರು, ಪಾರಾಜೀತ ಅಭ್ಯರ್ಥಿಗಳ ಜೊತೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ.
ವಾಲ್ಮೀಕಿ ನಿಗಮದ ಹಗರಣ ಬಯಲಿಗೆ ಬಂದ ಹಿನ್ನೆಲೆ ಸಚಿವರಿಗೆ ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ವರ್ಚಸ್ಸಿಗೆ ದಕ್ಕೆ ಬರದ ಹಾಗೆ ನೋಡಿಕೊಳ್ಳಿ, ಸರ್ಕಾರ ಇಕ್ಕಟ್ಟಿಗೆ ಸಿಲುಕಬಾರದು. ವಿರೋಧ ಪಕ್ಷಗಳ ವಾಗ್ದಾಳಿಗೆ ಸಿಲುಕದಂತೆ ಕಣ್ಣು, ಕಿವಿ ಅಲರ್ಟ್ ಮಾಡಿ ಕೆಲಸ ಮಾಡಿ ಎಂದು ಎಲ್ಲ ಸಚಿವರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ.
Nail Fungus: ಉಗುರು ಸುತ್ತು ಸಮಸ್ಯೆಗೆ ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದು!
ಇನ್ನೂ ಸಚಿವರ ಜತೆ ರಾಹುಲ್ ಗಾಂಧಿ ಪ್ರತ್ಯೇಕ ಸಭೆ ನಡೆಸಿ ಉಸ್ತುವಾರಿ ಹೊತ್ತ ಕ್ಷೇತ್ರದಲ್ಲಿ ಕಡಿಮೆ ಮತಗಳಿಸಿದ್ದು, ಸೋತಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೀವು ಹೇಳಿದವರಿಗೆ ಟಿಕೆಟ್ ಕೊಟ್ಟಿದ್ದೇವೆ.ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಿಮ್ಮ ಮೇಲಿತ್ತು. ಗೆಲ್ಲಿಸುವಲ್ಲಿ ವಿಫಲರಾಗಿದ್ದೀರಿ. ಜವಾಬ್ದಾರಿ ನಿರ್ವಹಿಸುವ ವಿಫಲರಾದವರ ಮೇಲೆ ಯಾವ ಕ್ರಮ ಕೈಗೊಳ್ಳಬೇಕು. ಮುಂದಿನ ದಿನದಲ್ಲಿ ಹೀಗಾಗದಂತೆ ನೋಡಿಕೊಳ್ಳಿ, ಸೋಲಿನ ಬಗ್ಗೆ ಸೂಚಿಸಿದ ಎಚ್ಚರಿಕೆಯಿಂದಿರುವಂತೆ ಸೂಚಿಸಿ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ.