ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ವಿಚಾರಣೆಗೊಳಗಾಗಿದ್ದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Becoming Father: ಏನೇ ಮಾಡಿದ್ರೂ ಅಪ್ಪ ಆಗೋಕೆ ಆಗ್ತಿಲ್ವಾ..? ಹಾಗಾದ್ರೆ ಪುರುಷರೇ ಈ ಆಹಾರ ತಿನ್ನಿ!
ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ವಾರ್ಡ್ ಸಂಖ್ಯೆ 2, ಆರ್ಆರ್ (ರಾಮ್ ರಹೀಮ್) ಕಾಲೊನಿಯಲ್ಲಿರುವ ದದ್ದಲ್ ಮನೆಯ ಮೇಲೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಬಸವನಗೌಡ ದದ್ದಲ್ ನಿವಾಸವಲ್ಲದೆ, ಬೆಂಗಳೂರು ನಗರದ ಯಲಹಂಕ, ಕೋರಮಂಗಲ ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.