ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ (Valmiki Development Corporation Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ನಿಗಮದ ಹಣವನ್ನು ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಿದ್ದಾರೆ ಎಂದು ಉಲ್ಲೇಖಿಸಿದೆ.
ವಾಲ್ಮೀಕಿ ಹಗರಣ ಕೇಸ್: ಮಾಜಿ ಸಚಿವ ನಾಗೇಂದ್ರ ಕಸ್ಟಡಿ ಅಂತ್ಯ, ಇಂದು ಕೋರ್ಟ್ ಗೆ ಹಾಜರು!
4 ರಾಜ್ಯಗಳಲ್ಲಿ 23 ಕಡೆ ಇಡಿ ಅಧಿಕಾರಿಗಳ (ED Officers) ತಂಡ ದಾಳಿ ನಡೆಸಿತ್ತು. ಈ ವೇಳೆ ಅನೇಕ ಸಾಕ್ಷ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದ ಇಡಿ ಬುಧವಾರ ಮಾಹಿತಿ ಬಹಿರಂಗಪಡಿಸಿದೆ. ಈ ಪ್ರಕರಣದಲ್ಲಿ ಸುಮಾರು 90 ಕೋಟಿ ರೂ.ಗಳಷ್ಟು ಅಕ್ರಮ ಮಾಡಲು 18 ನಕಲಿ ಬ್ಯಾಂಕ್ ಖಾತೆಗಳನ್ನ ಬಳಸಿದ್ದಾರೆ. ಈ ಹಣವನ್ನು ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಮದ್ಯ ಖರೀದಿ ಮಾಡಲು ಬಳಕೆ ಮಾಡಿರೋದು ಬೆಳಕಿಗೆ ಬಂದಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಲ್ಲದೇ, ಈ ಅಕ್ರಮಕ್ಕೆ ಸಂಬಂಧಿಸಿದಂತೆ ಬಿ.ಎನ್ ನಾಗೇಂದ್ರ ಮತ್ತು ದದ್ದಲ್ ಅವರ ಮನೆಯಲ್ಲಿ ಕೆಲ ಪ್ರಮುಖ ದಾಖಲೆಗಳನ್ನೂ ವಶಕ್ಕೆ ಪಡೆಯಲಾಗಿದೆ. ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ (Basanagouda Daddal) ಕೂಡ ಭಾಗಿ ಆಗಿದ್ದಾರೆ ಅಂತ ಇಡಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.