ಬೆಂಗಳೂರು:- ರಾಜ್ಯದ ೯೮ ನಗರಗಳಲ್ಲಿ ಆನ್ಲೈನ್ ಸೇವೆಗಳು ಮೂರು ದಿನಗಳವರೆಗೆ ಬಂದ್ ಆಗಲಿವೆ.
ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್೨೪ರ ರಾತ್ರಿ ೧೨ರಿಂದ ನವೆಂಬರ್ ೨೬ರ ಬೆಳಿಗ್ಗೆ ೧೧.೫೯ ವರೆಗೆ ಎಲ್ಲಾ ರೀತಿಯ ಆನ್ಲೈನ್ ಸೇವೆಗಳು ಬಂದ್ ಆಗಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ತಾಂತ್ರಿಕ ಕಾಮಗಾರಿಯೇನು? : ಎಲ್ಲಾ ಐದು ಎಸ್ಕಾಂ ಪೋರ್ಟಲ್ಗಳನ್ನು ಒಂದೇ ಸೂರಿನಡಿ ಆನ್ಲೈನ್ ಪಾವತಿ ಸೇವೆ ಕಲ್ಪಿಸಲು ಆರ್-ಎಪಿಡಿಆರ್ಪಿ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಎಲ್ಲಾ ಪೋರ್ಟಲ್ಗಳ ಡಾಟಾವನ್ನು ನೂತನ ಪೋರ್ಟಲ್ಗೆ ವರ್ಗಾವಣೆ ಮಾಡಲಾಗುತ್ತಿದೆ. ಹೀಗಾಗಿ ಪೋರ್ಟಲ್ ಸೇವೆ ಬಂದ್ ಆಗಲಿದ್ದು, ವಿದ್ಯುತ್ ಬಿಲ್ ಪಾವತಿ, ಆನ್ಲೈನ್ ಅರ್ಜಿ ಸಲ್ಲಿಕೆ ಸೇರಿದಂತೆ ಯಾವುದೇ ಸೌಲಭ್ಯಗಳು ದೊರೆಯುವುದಿಲ್ಲ.
ಈ ಮೂರು ದಿನಗಳು ಎಲ್ಲಾ ಮಾಹಿತಿ ತಂತ್ರಜ್ಞಾನ ಆಧಾರಿತ ಹಾಗೂ ವಿದ್ಯುತ್ ಕಚೇರಿಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ. ಹಾಗೂ ಆನ್ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು/ ಲೋಡ್ ಬದಲಾವಣೆ, ನಗದು ಪಾವತಿ, ಬಿಲ್ ಪಾವತಿ ಸೇವೆಗಳು ಇರುವುದಿಲ್ಲ. ಆದರೆ ಈ ಅವಧಿಯಲ್ಲಿ ವಿದ್ಯುತ್ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಯಾವ್ಯಾವ ನಗರಳಲ್ಲಿ ಸೇವೆ ಸ್ಥಗಿತ :
ಬೆಸ್ಕಾಂ: ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿ ಬಿದನೂರು.
ಮೆಸ್ಕಾಂ: ಬಂಟ್ವಾಳ, ಕಡೂರು, ತರಿಕೇರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.
ಸೆಸ್ಕ್: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್. ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚೆನ್ನರಾಯಪಟ್ಟಣ.
ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ.