ಇತ್ತೀಚಿನ ಟಿ20 ಬೌಲರ್ ಶ್ರೇಯಾಂಕದಲ್ಲಿ ವರುಣ್ ಚಕ್ರವರ್ತಿ ಮೂರು ಸ್ಥಾನಗಳ ಏರಿಕೆಯೊಂದಿಗೆ ನಂ.1 ಟಿ20 ಬೌಲರ್ ಆಗುವ ಸನಿಹದಲ್ಲಿದ್ದಾರೆ.
ಕಳೆದ ವಾರ ಬಿಡುಗಡೆಯಾಗಿದ್ದ ಐಸಿಸಿ ಶ್ರೇಯಾಂಕದಲ್ಲಿ 25 ಆಟಗಾರರನ್ನು ಹಿಂದಿಕ್ಕಿ 5 ನೇ ಸ್ಥಾನಕ್ಕೇರಿದ್ದ ಅವರು ಇದೀಗ 7 ದಿನಗಳಲ್ಲಿ ಮೂರು ಸ್ಥಾನ ಮೇಲೇರುವಲ್ಲಿ ಯಶಸ್ವಿಯಾಗಿದ್ದಾರೆ.
ಬೈಕ್ ಆಯ್ತು, ಕಾರಾಯ್ತು! ಈಗ ಟ್ರ್ಯಾಕ್ಟರ್ ಸರದಿ.. ಕಳ್ಳರು ಹಿಂಗೂ ಮಾಡ್ತಾರೆ!
ವರುಣ್ ಚಕ್ರವರ್ತಿ ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ 5 ಟಿ20 ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಇಡೀ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದ ವರುಣ್ಗೆ ಇದರ ಫಲವಾಗಿ ಸರಣಿಯ ಆಟಗಾರ ಪ್ರಶಸ್ತಿಯೂ ಲಭಿಸಿತ್ತು. ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳಲ್ಲಿ ಟಿ20 ಸರಣಿಯಲ್ಲಿ ವರುಣ್ ಚಕ್ರವರ್ತಿ 9.85 ಸರಾಸರಿಯಲ್ಲಿ 14 ವಿಕೆಟ್ಗಳನ್ನು ಪಡೆದಿದ್ದರು.
ಇದೀಗ ಬಿಡುಗಡೆಯಾಗಿರುವ ರ್ಯಾಂಕಿಂಗ್ನಲ್ಲಿ ವರುಣ್ ಚಕ್ರವರ್ತಿ, ಇಂಗ್ಲೆಂಡ್ನ ಆದಿಲ್ ರಶೀದ್ ಅವರೊಂದಿಗೆ ಜಂಟಿ ಎರಡನೇ ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ. ಇಬ್ಬರೂ ತಲಾ 705 ರೇಟಿಂಗ್ ಪಾಯಿಂಟ್ಗಳನ್ನು ಹೊಂದಿದ್ದು, ಇತ್ತೀಚಿನ ಟಿ20 ಶ್ರೇಯಾಂಕದಲ್ಲಿ ಆದಿಲ್ ರಶೀದ್ ಒಂದು ಸ್ಥಾನ ಕುಸಿದಿದ್ದಾರೆ. ಈ ಮೊದಲು ಮೊದಲ ಸ್ಥಾನದಲ್ಲಿದ್ದ ಆದಿಲ್ ರಶೀದ್ ಇದೀಗ ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ಆದರೆ ವರುಣ್ ಚಕ್ರವರ್ತಿ 3 ಸ್ಥಾನ ಜಿಗಿದು 2 ನೇ ಸ್ಥಾನಕ್ಕೆ ತಲುಪಿದ್ದಾರೆ