ಆಸ್ಟ್ರೇಲಿಯಾದ ಸಂಸತ್ತಿನಲ್ಲಿ ನೂತನ ಸೆನೆಟರ್ ಆಗಿ ಭಾರತ ಮೂಲದ ಬ್ಯಾರಿಸ್ಟರ್ ವರುಣ್ ಘೋಷ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಗವದ್ಗೀತೆಯ ಮೇಲೆ ಕೈಯಿಟ್ಟು ಪ್ರಮಾಣ ವಚನ ಸ್ವೀಕರಿಸಿದ ವರುಣ್ ಘೋಷ್ ಗೆ ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಅಭಿನಂದನೆ ಸಲ್ಲಿಸಿದ್ದಾರೆ.
ವರುಣ್ ಘೋಷ್ ನೂತನ ಸೆನೆಟರ್ ಆಗಿ ಅಧಿಕಾರ ಸ್ವೀಕರಿಸಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಪೆನ್ನಿ ವಾಂಗ್, ಪಶ್ಚಿಮ ಆಸ್ಟ್ರೇಲಿಯಾದ ನಮ್ಮ ಹೊಸ ಸೆನೆಟರ್ ವರುಣ್ ಘೋಷ್ ಅವರಿಗೆ ಸ್ವಾಗತ. ಸೆನೆಟರ್ ಘೋಷ್ ಅವರು ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಆಸ್ಟ್ರೇಲಿಯಾದ ಸೆನೆಟರ್ ಎಂದಿದ್ದಾರೆ.
ಲೇಬರ್ ಪಾರ್ಟಿಯು ವೆಸ್ಟರ್ನ್ ಆಸ್ಟ್ರೇಲಿಯವನ್ನು ಪ್ರತಿನಿಧಿಸಲು ಘೋಷ್ ಅವರನ್ನು ಆಯ್ಕೆ ಮಾಡಿದೆ. ಇತ್ತೀಚೆಗೆ ಘೋಷ್, ಫ್ರಾನ್ಸಿಸ್ ಬರ್ಟ್ ಚೇಂಬರ್ಸ್ನಲ್ಲಿ ಬ್ಯಾರಿಸ್ಟರ್, ಪ್ರಸ್ತುತ ಸೆನೆಟರ್ ಪ್ಯಾಟ್ರಿಕ್ ಡಾಡ್ಸನ್ ಅವರ ಸ್ಥಾನಕ್ಕೆ ಆಯ್ಕೆಯಾದರು.
ಸೆನೆಟರ್ ಆಗಿ ಅಧಿಕಾರ ಸ್ವೀಕರಿಸಿರುವ ವರುಣ್ ಘೋಷ್ ಪರ್ತ್ನಲ್ಲಿ ವೃತ್ತಿಯಲ್ಲಿ ವಕೀಲರಾಗಿದ್ದಾರೆ. ಪಶ್ಚಿಮ ಆಸ್ಟ್ರೇಲಿಯಾ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನಿನಲ್ಲಿ ಪದವಿಗಳನ್ನು ಪಡೆದಿರುವ ವರುಣ್ ಈ ಹಿಂದೆ ನ್ಯೂಯಾರ್ಕ್ನಲ್ಲಿ ಹಣಕಾಸು ವಕೀಲರಾಗಿ ಮತ್ತು ವಾಷಿಂಗ್ಟನ್ ಹಾಗೂ ಡಿಸಿಯಲ್ಲಿ ವಿಶ್ವ ಬ್ಯಾಂಕ್ನ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ.