ಚಿಕ್ಕಮಗಳೂರು:- ಚಿಕ್ಕಮಗಳೂರಿನಲ್ಲಿ ವರುಣಾರ್ಭಟ ಜೋರಾಗಿದ್ದು, ಜೋರು ಗಾಳಿ ಮಳೆಗೆ ಜನರಲ್ಲಿ ಆತಂಕ ಸೃಷ್ಟಿ ಆಗಿದೆ. ಮಳೆಯೊಂದಿಗೆ ಬಿಸುತ್ತಿರುವ ಬಿರುಗಾಳಿ ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿದೆ.
ಭೂಮಾಫಿಯಾ ಕೈಗೆ ಬಿಡಿಎ ವಾಣಿಜ್ಯ ಸಂಕೀರ್ಣ.. BDA ನಿರ್ಧಾರಕ್ಕೆ ಆಮ್ ಆದ್ಮಿ ವಿರೋಧ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ, ಎನ್ಆರ್ ಪುರ, ಜಯಪುರ, ಕೊಪ್ಪ, ಬಾಳೆಹೊನ್ನೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು ಮಲೆನಾಡು ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ವಾಡಿಕೆ ಪ್ರಮಾಣದಲ್ಲಿ ಮಳೆಯಾಗದೆ ಮಲೆನಾಡು ಭಾಗದಲ್ಲಿ ಬರದ ಆತಂಕ ಸೃಷ್ಟಿಯಾಗಿತ್ತು. ಆದರೆ ಕಳೆದ ಒಂದು ವಾರದಿಂದ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು ಮಲೆನಾಡಿಗರು ಹರ್ಷಗೊಂಡಿದ್ದಾರೆ
ಮಳೆಗಾಲ ಆರಂಭಕ್ಕೂ ಮುನ್ನ ಮುಂಗಾರು ಪೂರ್ವ ಮಳೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮವಾಗಿದ್ದು ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಳೆಯೊಂದಿಗೆ ಬಿಸುತ್ತಿರುವ ಬಿರುಗಾಳಿಗೆ ಜನ ಕಂಗಾಲಾಗಿದ್ದಾರೆ. ವೇಗವಾಗಿ ಬಿಸುತ್ತಿರುವ ಬಿರುಗಾಳಿಗೆ ಮರಗಳು ಉರಳಿ ಬೀಳುತ್ತಿದ್ದು ಜನ ಆತಂಕಗೊಂಡಿದ್ದಾರೆ.