ಬೆಂಗಳೂರು:- ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ ಹೆಚ್ಚಾಗಲಿದ್ದು, 5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ದಿನ ಒಟ್ಟಿಗೆ 4,000 ರೂ. ಜಮಾ: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್!
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್, ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆಯಲ್ಲೂ ಮಳೆಯಾಗಲಿದೆ.