ದಾವಣಗೆರೆ: ” ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯು ಹಲವು ನ್ಯೂನತೆಗಳಿಂದ ಕೂಡಿದೆ. ಯಾವುದೇ ಕಾರಣಕ್ಕೂ ಈಗಿನ ವರದಿ ಒಪ್ಪುವುದಿಲ್ಲ ” ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮದೇ ಸರಕಾರದ ವಿರುದ್ಧ ಸಿಡಿಮಿಡಿಗೊಂಡರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮುದಾಯದ ಮನೆ ಮನೆಗೂ ಹೋಗಿ ಸಮೀಕ್ಷೆ ಮಾಡಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ ಎಂದು ಆರೋಪಿಸಿದರು.
” ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯಿತ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಇದರಿಂದ ಸಮಾಜಕ್ಕೆ ತೀವ್ರ ಸ್ವರೂಪದ ನಷ್ಟವಾಗಲಿದೆ. ಜನಗಣತಿಯ ಅಂಕಿ – ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಹೀಗಾಗಿ, ಮತ್ತೊಮ್ಮೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿಸಬೇಕು,” ಎಂದು ಆಗ್ರಹಿಸಿದರು. ”ವೀರಶೈವ ಲಿಂಗಾಯಿತ ಸಮುದಾಯವು ಎಲ್ಲರ ಒಳಿತನ್ನೂ ಬಯಸುತ್ತದೆ. ನಾವು ಜಾತಿ ಗಣತಿಯ ವಿರೋಧಿಗಳಲ್ಲ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಆದರೆ, ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಯ. ಈಗಾಗಲೇ 8 ವರ್ಷದಷ್ಟು ಹಳೆಯದಾಗಿರುವ ವರದಿಯು ಹಲವು ನ್ಯೂನತೆಗಳಿಂದ ಕೂಡಿದೆ. ಈ ನ್ಯೂನತೆಗಳನ್ನು ಸರಿಪಡಿಸುವಂತೆ ವೀರಶೈವ ಲಿಂಗಾಯಿತ ಮಹಾಸಭಾ ಒತ್ತಾಯಿಸುತ್ತದೆ. ಹೊಸದಾಗಿ ಮತ್ತು ಆಧುನಿಕ ತಂತ್ರಜ್ಞಾನ ಬಳಸಿ ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಬೇಕು,” ಎಂದು ಒತ್ತಾಯಿಸಿದರು.