ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತಿಮ ಯಾತ್ರೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಮೆರವಣಿಗೆ ಮಾರ್ಗದುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರು, ವೀರಯೋಧನಿಗೆ ಭಾವುಕ ವಿದಾಯ ಹೇಳಿದ್ದಾರೆ.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಶನಿವಾರ ಬೆಳಗ್ಗೆ ಜಿಗಣಿ ನಂದನವನ ಬಡಾವಣೆಯ ಸ್ವಗೃಹದಲ್ಲಿ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಜನರು, ಗಣ್ಯರು, ಬಂಧು-ಬಾಂಧವರು ಆಗಮಿಸಿ ವೀರಯೋಧನ ಅಂತಿಮ ದರ್ಶನ ಪಡೆದರು. ಈಗ ಪ್ರಾಂಜಲ್ ಅಂತಿಮ ಯಾತ್ರೆ ನಡೆಯುತ್ತಿದೆ.
ಜಿಗಣಿ ಓಟಿಸಿ ಸರ್ಕಲ್, ಬನ್ನೇರುಘಟ್ಟ ಮುಖ್ಯ ರಸ್ತೆ, ನೈಸ್ ರೋಡ್, ಕೋನಪ್ಪನ ಅಗ್ರಹಾರ ಸರ್ಕಲ್, ಕೂಡ್ಲುಗೇಟ್ ಮೂಲಕ ಹುತಾತ್ಮ ಯೋಧನ ಅಂತಿಮ ಯಾತ್ರೆ ಸಾಗಿದೆ. ಮಾರ್ಗದುದ್ದಕ್ಕೂ ನಿಂತಿದ್ದ ಜನರು ತ್ರಿವರ್ಣ ಧ್ವಜ ಹಿಡಿದು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಈ ದೃಶ್ಯವು ನೋಡುಗರ ಮನಕಲಕುವಂತಿದೆ.