ದೊಡ್ಡಬಳ್ಳಾಪುರ: ಬ್ಯಾಕ್ ಟು ಬ್ಯಾಕ್ ರಸ್ತೆ ಅಪಘಾತಗಳು ನಡೆಯುತ್ತಲೆ ಇವೆ. ಸದ್ಯ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. 8 ಮಂದಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಬಳಿ ನಡೆದಿದೆ.
ಹಿಂದೂಪುರದಿಂದ ಶಬರಿಮಲೆ ಯಾತ್ರೆಗೆ ಹೊರಟಿದ್ದರು. ಚಾಲಕ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿ ಅವಘಡ ಸಂಭವಿಸಿದೆ. 8 ಮಾಲಾಧಾರಿಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಿಲ್ಲ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.