ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ 4 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎಂದು ಸರಿಗಮ ವಿಜಯ್ ಮಗ ರೋಹಿತ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಗುರುತಿಸಿಕೊಂಡರು. ನಟ ಸರಿಗಮ ವಿಜಯ್ ಅವರು 269 ಚಿತ್ರಗಳಲ್ಲಿ ನಟಸಿ, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆ ಮಾಡಿದ್ದಾರೆ.