ಬೆಂಗಳೂರು:- ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ನೋರ್ಬೆರ್ಟ್ ಡಿಸೋಜ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 88 ವರ್ಷದ ಡಿಸೋಜ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 7.50ಕ್ಕೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಯುವನಿಧಿ: ಜ.6 ರಿಂದ ವಿಶೇಷ ನೋಂದಣಿ ಅಭಿಯಾನ: ಫುಲ್ ಡೀಟೈಲ್ಸ್ ಇಲ್ಲಿ ತಿಳಿಯಿರಿ!
ಇನ್ನೂ ಅವರ ನಿಧನದ ಗೌರವಾರ್ಥ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ರಾಜಕೀಯ ವ್ಯಕ್ತಿಗಳು ನಿಧನ ಹೊಂದಿದಾಗ ರಜೆ ಘೋಷಿಸುವ ಸರ್ಕಾರಗಳು, ಇಂತಹ ಸರ್ವ ಧರ್ಮಸಮಭಾವದ ಪ್ರತಿಪಾದಕ, ಕನ್ನಡದ ನಾಡಿ ಎಂದೇ ಜನಜನಿತರಾಗಿದ್ದ ನಾ. ಡಿಸೋಜ ಅವರ ನಿಧನಕ್ಕೆ ಸಂತಾಪ ಸೂಚಿಸಲು ಇಂದು ರಜೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಇಂದು ರಜೆ ಘೋಷಿಸಲಾಗಿಲ್ಲ.
ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 6ರಂದು ಡಿಸೋಜ ಜನಿಸಿದರು. ಪರಿಸರ ಕಾಳಜಿ ಜೊತೆಗೆ ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಅಲ್ಲದೆ ಅವರು ಬರೆದಿರುವ ಹಲವು ಕಾದಂಬರಿಗಳು ಸಿನಿಮಾಗಳಾಗಿ ಮೂಡಿಬಂದಿವೆ. ಇವುಗಳಲ್ಲಿ ‘ಕಾಡಿನ ಬೆಂಕಿ’ ಚಿತ್ರ ರಜತ ಕಮಲ ಪ್ರಶಸ್ತಿಯನ್ನ ಪಡೆದರೆ ‘ದ್ವೀಪ’ ಚಿತ್ರ ಸ್ವರ್ಣ ಕಮಲ ಪ್ರಶಸ್ತಿ ಗಳಿಸಿತ್ತು.
ಲೋಕೋಪಯೋಗಿ ಇಲಾಖೆಯಲ್ಲಿ ವೃತ್ತಿಜೀವನ ಪ್ರಾರಂಭಿಸಿದ್ದ ನಾ. ಡಿಸೋಜ ಅವರು ಶರಾವತಿ ಯೋಜನೆ, ಕಾರ್ಗಲ್, ಮಾಸ್ತಿಕಟ್ಟೆ, ತೀರ್ಥಹಳ್ಳಿ, ಸಾಗರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. ನಾ. ಡಿಸೋಜ ಅವರು ಬರೆದಿರುವ ಕಾದಂಬರಿ ಆಧಾರಿತ ಶ್ರೀನಿವಾಸಮೂರ್ತಿ ನಿರ್ದೇಶನದ ‘ಬಳುವಳಿ’, ಕೋಡ್ಲು ರಾಮಕೃಷ್ಣರವರ ನಿರ್ದೇಶನದ ‘ಬೆಟ್ಟದಪುರದ ದಿಟ್ಟ ಮಕ್ಕಳು’ ಮತ್ತು ಮನು ನಿರ್ದೇಶನದ ‘ಆಂತರ್ಯ’ ಚಲನಚಿತ್ರಗಳು ಜನಪ್ರಿಯತೆ ಗಳಿಸಿವೆ.