ಬೆಂಗಳೂರು:- ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಸಿಟಿ ರವಿಗೆ ಲಕ್ ಖುಲಾಯಿಸಿದೆ.
Pistachio Benefits: ನಿತ್ಯ 2 ಪಿಸ್ತಾ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ.
ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್ ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಚಾನ್ಸ್ ಕೊಟ್ಟರೆ, ಸಿಟಿ ರವಿ ಅವರಿಗೆ ಬಂಪರ್ ಗಿಫ್ಟ್ ಕೊಟ್ಟಿದೆ. ಆದ್ರೆ, ಮಂಡ್ಯ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್ಗೆ ನಿರಾಸೆಯಾಗಿದೆ.
ಎಂಎಲ್ಸಿ ಚುನಾವಣೆಗೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದಿತ್ತು. ಅದರಲ್ಲೂ ಪ್ರಮುಖವಾಗಿ ಮಂಡ್ಯ ಲೋಕಸಭಾ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್ ಅವರ ಹೆಸರು ಮುಂಚೂಣಿಯಲ್ಲಿತ್ತು