ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ಲೋಡ್ ಮಾಡುವುದು ಮತ್ತು ನೋಡುವುದು ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಕಠಿಣ ಕಾನೂನಿನ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕೇವಲ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ಲೋಡ್ ಮಾಡುವುದು ಮತ್ತು ನೋಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರಿದ್ದ ದ್ವಿಸದಸ್ಯ ಪೀಠವು ತಳ್ಳಿಹಾಕಿತು. ತೀರ್ಪು ನೀಡುವಲ್ಲಿ ಹೈಕೋರ್ಟ್ ಮಹಾ ತಪ್ಪು ಎಸಗಿದೆ ಎಸಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ರಾತ್ರಿ ಬಟ್ಟೆಯಿಲ್ಲದೇ ಮಲಗಿದ್ರೆ ಏನಾಗುತ್ತೆ..? ಇಲ್ಲಿದೆ ನಿಮಗೆ ಗೊತ್ತಿಲ್ಲದ ರೋಚಕ ಸತ್ಯಗಳು
ನ್ಯಾಯಾಲಯವು ‘Child pornography’ ಪದದ ಬಳಕೆಯನ್ನು ಅಸಮ್ಮತಿಗೊಳಿಸಿದೆ ಮತ್ತು ಸಂಸತ್ತು ಪೋಕ್ಸೊ ಕಾಯಿದೆಗೆ ತಿದ್ದುಪಡಿಯನ್ನು ತರಬೇಕು ಎಂದು ಸಲಹೆ ನೀಡಿತು. ನಾವು ಸುಗ್ರೀವಾಜ್ಞೆಯನ್ನು ತರಬಹುದು ಎಂದು ಸೂಚಿಸಿದ್ದೇವೆ. ಯಾವುದೇ ಆದೇಶಗಳಲ್ಲಿ ಇದನ್ನು `’Child pornography’ ಎಂದು ಉಲ್ಲೇಖಿಸದಂತೆ ನಾವು ಎಲ್ಲಾ ಕೆಳಹಂತದ ನ್ಯಾಯಾಲಯಗಳಿಗೆ ಸೂಚಿಸಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಯಾವುದೇ ಡಿಜಿಟಲ್ ಸಾಧನದಲ್ಲಿ ಯಾವುದೇ ರೂಪದಲ್ಲಿ, ಅಂತರ್ಜಾಲದಲ್ಲಿ ವ್ಯಕ್ತಿಯು ಯಾವುದೇ ಮಕ್ಕಳ ಅಶ್ಲೀಲ ದೃಶ್ಯವನ್ನು ವೀಕ್ಷಿಸುವುದು, ಹಂಚುವುದು ಅಥವಾ ಪ್ರದರ್ಶಿಸುವುದು ಸಹ ಅಪರಾಧವಾಗಿದೆ. ಪೋಕ್ಸೊ ಕಾಯ್ದೆಯ ಸೆಕ್ಷನ್ 15ರ ಪ್ರಕಾರ, ಯಾವುದೇ ವ್ಯಕ್ತಿಯು ಮಗುವನ್ನು ಒಳಗೊಂಡ ಯಾವುದೇ ಅಶ್ಲೀಲ ವೀಡಿಯೋ ಅಥವಾ ಫೋಟೋ ಸಂಗ್ರಹಿಸಿ ಅದನ್ನು ನಾಶಪಡಿಸಲು ವಿಫಲವಾದರೆ 5,000 ರೂ. ಮತ್ತು ಪುನರಾವರ್ತಿತ ಅಪರಾಧಕ್ಕೆ 10,000 ರೂ. ದಂಡ ವಿಧಿಸಲಾಗುತ್ತದೆ.
ಪ್ರಸಾರ ಮಾಡಲು ಸಂಗ್ರಹಿಸಿದರೆ, ದಂಡದ ಜೊತೆಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ವಾಣಿಜ್ಯ ಉದ್ದೇಶಕ್ಕಾಗಿ ಮಕ್ಕಳ ಅಶ್ಲೀಲ ವಸ್ತುಗಳನ್ನು ಸಂಗ್ರಹಿಸಿದರೆ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ನಂತರದ ಅಪರಾಧದಲ್ಲಿ ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.