ವಿಜಯನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಡಾ.ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಎಂ. ಕೃಷ್ಣಪ್ಪ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು ಎಲ್ಲಾ ದಾನಗಳಲ್ಲೇ ರಕ್ತದಾನ ಶ್ರೇಷ್ಠದಾನ. ರಕ್ತವನ್ನು ದಾನ ಮಾಡುವುದು ಒಳ್ಳೆಯ ಕಾರ್ಯ. ರಕ್ತದಾನ ಮತ್ತೊಬ್ಬರ ಪ್ರಾಣ ಉಳಿಸುವ ಜೊತೆಗೆ ವ್ಯಕ್ತಿ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
