ಚಾಮರಾಜನಗರ:- ಬಿ.ವೈ ವಿಜಯೇಂದ್ರ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಹಿನ್ನಲೆ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚಾಮರಾಜನಗರ ಜಿಲ್ಲಾ ಕೇಂದ್ರದ ಭುವನೇಶ್ವರಿ ವೃತ್ತದಲ್ಲಿ ಪಟಾಕಿ ಸಿಡಿಸಿ,ಸಿಹಿ ವಿತರಿಸಿ ಸಂಭ್ರಮಿಸಿದ್ದಾರೆ. ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷ ಮೂಡ್ಲೂಪುರ ನಂದೀಶ್ ನೇತೃತ್ವದಲ್ಲಿ ಅಭಿಮಾನಿಗಳಿಂದ ಸಂಭ್ರಮ ಮನೆ ಮಾಡಿದೆ.
ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿ.ಎಂ ಯಡಿಯೂರಪ್ಪಗೆ ಜೈಕಾರ ಘೋಷಣೆ ಮೊಳಗಿದೆ. ಮಾಜಿ ಸಿ.ಎಂ.ಬಿಸವೈ ಹಾಗೂ ವಿಜಯೇಂದ್ರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.