ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ ವಿಚಾರ ಸಂಬಂಧ ಇದು ಅವರ ಪಕ್ಷದ ಆಂತರಿಕ ವಿಚಾರ. ಆದರೆ ರಾಜ್ಯದ ದೃಷ್ಟಿಯಿಂದ ವಿರೋಧ ಪಕ್ಷ ಬಲಿಷ್ಠವಾಗಿರಬೇಕು. ಸರ್ಕಾರವನ್ನು ಪಾಸಿಟಿವ್ ಆಗಿ ಎಚ್ಚರಿಸಬೇಕೆಂಬುದು ನಮ್ಮ ಅಪೇಕ್ಷೆ. ಯಾವುದೇ ಸರ್ಕಾರ ಇದ್ದರೂ ಅದನ್ನು ನಿರೀಕ್ಷೆ ಮಾಡುತ್ತೇವೆ. ವಿಜಯೇಂದ್ರ ಒಳ್ಳೇ ಸಂಘಟನೆಗಾರ ಎಂದು ಹೇಳಲು ಬರುವುದಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಯಾವುದೇ ಕ್ರಮವಿಲ್ಲ. ಬರಪೀಡಿತ ಜಿಲ್ಲೆಗಳಿಗೆ ಈವರೆಗೂ ಯಾವುದೇ ಸಚಿವರು ಭೇಟಿ ನೀಡಿಲ್ಲ ಎಂದು ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದ ಅಹಂ, ಗರ್ವದಿಂದ ಸಚಿವರು ಮೆರೆಯುತ್ತಿದ್ದಾರೆ. ಮುಂದೆ ಈ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಆಗಬೇಕು ಎಂದರು.
ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ. ನನಗೆ ನೀಡಿರುವ ಸ್ಥಾನದ ಬಗ್ಗೆ ಅರಿವು ಇದೆ, ಜವಾಬ್ದಾರಿ ಹೆಚ್ಚಿದೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಕಾರ್ಯಕರ್ತರು ತಲೆತಗ್ಗಿಸುವ ಕೆಲಸ ಮಾಡದಂತೆ ಪಕ್ಷ ಸಂಘಟನೆ ಮಾಡುವೆ ಎಂದು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಬಿ.ವೈ.ವಿಜಯೇಂದ್ರ ಹೇಳಿದರು.