ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬಳಸಿಕೊಳ್ಳಲೆಂದೇ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರನ್ನು ಎರಡು ಬಾರಿ ಸಿಎಂ ಸ್ಥಾನದಿಂದ ಕೆಳಗಿಳಿಸಿದರು. ಅವರನ್ನು ಯಾವ ರೀತಿ ನಡೆಸಿಕೊಂಡರು ಎಂಬುದು ಎಲ್ಲರಿಗೂ ಗೊತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಬೆಂಕಿ ಹತ್ತಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕೆಂದು ವಿಜಯೇಂದ್ರ ನೇಮಕ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.
https://ainlivenews.com/what-happens-if-tea-coffee-is-given-to-children/
ಇಷ್ಟಕ್ಕೂ ಇದು ವಿಜಯೇಂದ್ರ ಮೇಲಿನ ಪ್ರೀತಿಯಲ್ಲ. ಬದಲಿಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಚೆನ್ನಾಗಿ ಬಳಸಿಕೊಳ್ಳಬೇಕು ಎಂಬ ದೂರದೃಷ್ಟಿಯಿಂದ ನೇಮಕ ಮಾಡಿದ್ದಾರೆ. ಚುನಾವಣೆ ನಂತರ ಮುಂದಿನ ವಿಧಾನಸಭೆ ಚುನಾವಣೆ ಹೊತ್ತಿಗೆ ವಿಜಯೇಂದ್ರ ಹಠಾವೋ ನಡೆಯಲಿದೆ ಎಂದರು.