ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಮುಖ್ಯಮಂತ್ರಿ ಮಾಡಿಯೇ ಮಾಡುತ್ತೇವೆ. ಬಿವೈ ವಿಜಯೇಂದ್ರ ಮುಖ್ಯಮಂತ್ರಿ ಆಗುವವರೆಗೂ ನಾವು ಅವರ ಶಕ್ತಿಯಾಗಿರುತ್ತೇವೆ. ಬಿವೈ ವಿಜಯೇಂದ್ರ ಮೀನಿನ ಮರಿಯಂತೆ. ಮೀನಿನ ಮರಿಗೆ ಈಜು ಕಲಿಸುವ ಅವಶ್ಯಕತೆ ಇಲ್ಲ. ಬಿಎಸ್ ಯಡಿಯೂರಪ್ಪ ಅವರಿಗಿಂತ ಬಿವೈ ವಿಜಯೇಂದ್ರ ಒಂದು ಹೆಜ್ಜೆ ಮುಂದಿರುತ್ತಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಬಾಗಲಕೋಟೆಗೆ ಭೇಟಿ ನೀಡಿದ್ದಾರೆ. ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಶ್ರಮಿಸಬೇಕಿದೆ. ಕಳೆದ ಚುನಾವಣೆಯಲ್ಲಿ ತಪ್ಪು ಕಲ್ಪನೆಯಿಂದ ಹಿನ್ನಡೆಯಾಯಿತು. ಕರ್ನಾಟಕದಲ್ಲಿ ಬಿಜೆಪಿ ಬಹಳ ಬಲಿಷ್ಠವಾಗಿದೆ.
Curry Leaves: ಕರಿಬೇವಿನ ಎಲೆಗಳು ಅಡುಗೆಗೂ ಸೈ, ಆರೋಗ್ಯಕ್ಕೂ ಸೈ..! ಇದರಿಂದಿವೆ ಅನೇಕ ಪ್ರಯೋಜನ
ಗಡಿಯಲ್ಲಿ ಸೈನಿಕರಿದ್ದಂತೆ ರಾಜ್ಯದಲ್ಲಿ ಪಕ್ಷದ ಕಾರ್ಯಕರ್ತರಿದ್ದಾರೆ. ಪ್ರವಾಹ, ಕೊರೊನಾ ಸಂದರ್ಭದಲ್ಲಿ ಅತ್ಯುತ್ತಮ ಆಡಳಿತ ನೀಡಿದ್ದೇವೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ನಾವು ವಿಫಲವಾದೆವು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಮಸ್ಯೆ ಬದಿಗೊತ್ತಿ, ಒಂದಾಗಿ ಕೆಲಸ ಮಾಡಬೇಕಿದೆ. 28 ಕ್ಷೇತ್ರಗಳಲ್ಲೂ ಗೆದ್ದು ದೇಶದಲ್ಲಿ ಕರ್ನಾಟಕ ಪ್ರಥಮ ಎನ್ನಿಸಿಕೊಳ್ಳಬೇಕು ಹಾಗೇ ಕೆಲಸ ಮಾಡೋಣವೆಂದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು.