ರಾಮನಗರ:- ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಆಯ್ಕೆ ಇಂದಿನ ಸ್ಥಿತಿಗೆ ಸರಿಯಾಗಿದೆ ಎಂದು ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಇಂದಿನ ಪರಿಸ್ಥಿತಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ನೂರಕ್ಕೆ ನೂರರಷ್ಟು ಸರಿಯಾಗಿದೆ’ ಎಂದರು.
ವಿಜಯೇಂದ್ರ ಅವರು ಹಿಂದೆ ಪಕ್ಷದ ಉಪಾಧ್ಯಕ್ಷರಾಗಿದ್ದರು. ಅವರಿಗೆ ಅನುಭವ ಇದೆ. ಎಲ್ಲ ಜಿಲ್ಲೆಗಳ ನಾಯಕರ ಪರಿಚಯವೂ ಅವರಿಗಿದೆ. ಹೀಗಾಗಿ, ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಅವರ ಆಯ್ಕೆ ಒಳ್ಳೆಯ ಬೆಳವಣಿಗೆ’ ಎಂದರು.
‘ವಿಜಯೇಂದ್ರ ಅವರ ಆಯ್ಕೆ ಕುಟುಂಬ ರಾಜಕಾರಣ ಎಂದು ಹೇಳಲು ಸಾಧ್ಯವಿಲ್ಲ. ಅವರ ತಂದೆ ಬಿ.ಎಸ್. ಯಡಿಯೂರಪ್ಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದ ಮೇಲೆಯೇ ಅವರ ಮಗನಿಗೆ ಅಧಿಕಾರ ನೀಡಿದ್ದಾರೆ. ಅವರು ಹಿಂದೆ ಪಕ್ಷದ ಉಪಾಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿ, ಈಗ ಶಾಸಕರಾಗಿದ್ದಾರೆ’ ಎಂದು ತಿಳಿಸಿದರು.
ನನ್ನನ್ನು ಯಾರು ಬೇಕಿದ್ದರೂ ಕಡೆಗಣಿಸಲಿ, ಬಿಡಲಿ. ಕ್ಷೇತ್ರದ ಜನ ನನ್ನನು ಕಡೆಗಣಿಸಿಲ್ಲ. ಬಿಜೆಪಿಯಿಂದಲೂ ನಾನು ದೂರ ಉಳಿದಿಲ್ಲ. ನನ್ನ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.