ಬೆಂಗಳೂರು: ವಿಜಯೇಂದ್ರ ರಾಜಾಧ್ಯಕ್ಷರಾಗಿ ಆಯ್ಕೆ ಆಗಿರುವುದು ಖುಷಿಯಾಗಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಬೂತ್ ಅಧ್ಯಕ್ಷ ಶಶಿಧರ್ ತಿಳಿಸಿದ್ದಾರೆ. ವಿಜಯೇಂದ್ರ ನಮ್ಮ ಮನೆಗೆ ಬರುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಯಡಿಯೂರಪ್ಪ ಪ್ರೇರಣೆಯಿಂದ ನಾನು ಬಿಜೆಪಿಗೆ ಬಂದಿದ್ದು ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದರು.
Yadiyurappa: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ಸಿಗುತ್ತೆ ಅಂತ ನಾವ್ಯಾರು ನಿರೀಕ್ಷೆ ಇಟ್ಟಿರಲಿಲ್ಲ: BSY
ರಾಜ್ಯ ಬಿಜೆಪಿ ಘಟಕ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ಹಿನ್ನೆಲೆ ನ.15 ಅಥವಾ 16ರಂದು ಅಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ ಸಾಧ್ಯತೆ. ನ.17ರಂದು ಶಾಸಕಾಂಗ ಸಭೆ ನಡೆಸಿ ದೆಹಲಿಗೆ ತೆರಳುವ ವಿಜಯೇಂದ್ರ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ಹಿನ್ನೆಲೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿದೆ. ಶಿವಮೊಗ್ಗದ ವಿನೋಬನಗರದಲ್ಲಿರುವ ಯಡಿಯೂರಪ್ಪ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಹೆಗಲ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದ್ದಾರೆ. ಯಡಿಯೂರಪ್ಪ ಹಾಗು ವಿಜಯೇಂದ್ರ ಅವರಿಗೆ ಜೈಕಾರ ಕೂಗಿದ್ದಾರೆ.