ರಾಮನಗರ: ಬಿವೈ ವಿಜಯೇಂದ್ರ (BY VIjayendra) ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ಪಕ್ಷದ ಹಿರಿಯ ನಾಯಕರು ಹಾಗೂ ವಿವಿಧ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ. ಅದರಂತೆ ಇದೀಗ ಮೈತ್ರಿ ಪಕ್ಷದ ನಾಯಕ ಮಾಜಿ ಮಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಭೇಟಿ ಮಾಡಿದರು.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ಬಿಡದಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಮಹತ್ವ ಪಡೆದುಕೊಂಡಿದೆ.