ನವದೆಹಲಿ:- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿವೈ ವಿಜಯೇಂದ್ರ ಭೇಟಿ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷವಾದ್ದರಿಂದ ತಾವು ಮಾಡಿದ ಕೆಲಸಗಳ ಬಗ್ಗೆ ಈ ವೇಳೆ ಅಮಿತ್ ಶಾ ಅವರಿಗೆ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಭೇಟಿ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಟೀಂನ ಪ್ರತ್ಯೇಕ ಹೋರಾಟದ ಬಗ್ಗೆಯೂ ವಿಜಯೇಂದ್ರ ಪ್ರಸ್ತಾಪ ಮಾಡಿದ್ದಾರೆ.
ಬಿಜೆಪಿ ನಾಯಕತ್ವಕ್ಕೆ ಬೆಂಬಲಿಸದೆ ವಕ್ಫ್ ಹೆಸರಿನಲ್ಲಿ ಯತ್ನಾಳ್ ಪ್ರತ್ಯೇಕ ಹೋರಾಟ ಮಾಡುತ್ತಿದ್ದಾರೆ, ಪ್ರತಿದಿನವೂ ನನ್ನ ಮತ್ತು ಯಡಿಯೂರಪ್ಪನವರ ವಿರುದ್ಧ ಯತ್ನಾಳ್ ಮಾತನಾಡುತ್ತಿದ್ದಾರೆ. ಪ್ರತ್ಯೇಕ ಸಭೆಗಳಿಂದ ಸಂಘಟನೆಗೆ ಹೊಡೆತ ಬೀಳುತ್ತಿದೆ. ಕಾಂಗ್ರೆಸ್ ವಿರುದ್ಧ ಹೋರಾಡಲು ಅನೇಕ ವಿಷಯಗಳಿವೆ. ಆದರೆ, ನಮ್ಮಲ್ಲಿನ ಭಿನ್ನಾಭಿಪ್ರಾಯದಿಂದ ಹೋರಾಟ ಗಟ್ಟಿ ಆಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟ ಗಟ್ಟಿ ಆಗುತ್ತಿಲ್ಲ. ಹೀಗಾಗಿ, ಭಿನ್ನಮತಕ್ಕೆ ಬ್ರೇಕ್ ಹಾಕುವಂತೆ ಅಮಿತ್ ಶಾ ಅವರಿಗೆ ವಿಜಯೇಂದ್ರ ಮನವಿ ಮಾಡಿದ್ದಾರೆ ಎನ್ನಲಾಗಿದೆ.