ಗದಗ: ಮನೆ ಕಟ್ಟುವಂತ ಕೆಲಸ ಮಾಡಬೇಕು ವಿನಃ ಮನೆ ಒಡೆಯುವ ಕೆಲಸ ಮಾಡಬಾರದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟಾಂಗ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತ್ಯೇಕ ಲಿಂಗಾಯತ ಕೂಗು ಶೆಟ್ಟರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು,
ಜಗದೀಶ ಶೆಟ್ಟರ್ ಅವರ ಮಾತನ್ನು ಕೇಳಿದೆ. ಕಳೆದ ಬಾರಿ ಸಿದ್ದರಾಮಯ್ಯ ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಅನ್ನುವುದು ಖಾತ್ರಿ ಆದ ಬಳಿಕ ವೀರಶೈವ ಲಿಂಗಾಯತ ಸಮಾಜವನ್ನು ಪ್ರತ್ಯೇಕ ಧರ್ಮ ಅಂತ ಬೆಂಕಿ ಹಚ್ಚುವ ಕೆಲಸ ಮಾಡಿದರು ಎಂದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗವಾಗಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಷಯಕ್ಕೆ ಕೈ ಹಾಕಬಾರದು ಅಂತ ಕ್ಷಮೆಯಾಚನೆ ಮಾಡಿದ್ದರು.
ಸ್ವಾರ್ಥ ರಾಜಕಾರಣಕ್ಕಾಗಿ ಕಾಂಗ್ರೆಸ್ನವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ ಎಂಬುದು ಮತ್ತೊಮ್ಮೆ ರುಜುವಾತಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಐಷಾರಾಮಿ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ ಇದು ಅವಶ್ಯಕತೆ ಇತ್ತಾ ಅಂತ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಜೊತೆಗೆ ಇರುವ ಮಂತ್ರಿ ಫ್ಯಾಷನ್ ಶೋ ಮಾಡಿದ್ದರು. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬಗ್ಗೆ ಇವರಿಗೆ ಕಾಳಜಿ ಇಲ್ಲ ಎಂದು ಕಿಡಿಕಾರಿದ್ದಾರೆ.