ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜಯಬೇರಿ ಬಿಜೆಪಿ ಭಾರಿಸಬೇಕು. ರಾಜ್ಯದಲ್ಲೂ ಬಿಜೆಪಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಬೇಕು. ಮೂರನೇ ಬಾರಿಗೆ ಪ್ರಧಾನಿ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕು. ಪಕ್ಷದಲ್ಲಿ ಹಿರಿಯರಿದ್ದರೂ ಸಹ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ
. ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ನಮ್ಮ ರಾಷ್ಟ್ರೀಯ ನಾಯಕರ ತೀರ್ಮಾನ. ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಎಲ್ಲಾ ಶಾಸಕರುಗಳು ಭಾಗವಹಿಸುತ್ತಾರೆ. ಶಾಸಕಾಂಗ ಪಕ್ಷದ ಸಭೆಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬರಲಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿದರು.