ಬೆಂಗಳೂರು: ಯತ್ನಾಳ್ ವಿರುದ್ಧ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ಯತ್ನಾಳ್ ಬಣದ ರಾಜಕೀಯದ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ದಾಸ್ ಅಗರ್ವಾಲ್ ಸಮ್ಮುಖದಲ್ಲಿ ವಿಜಯೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯಲ್ಲಿ ಪ್ರಾಮಾಣಿಕ ಕಾರ್ಯಕರ್ತ ನಾನೇ, ನಾನ್ಯಾಕೆ ಸಿಎಂ ಆಗ್ಬಾರ್ದು: ಯತ್ನಾಳ್!
ಯತ್ನಾಳ್ ವಿಚಾರವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು. ಏನಾದರೊಂದು ತೀರ್ಮಾನ ತೆಗೆದುಕೊಳ್ಳಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.
ಪಕ್ಷದಲ್ಲಿ ಕೆಲವರು ಮಾತನಾಡುತ್ತಿರುವುದರ ಬಗ್ಗೆ, ಪಕ್ಷ ವಿರೋಧಿ ಹೇಳಿಕೆಗಳ ಬಗ್ಗೆ ಚರ್ಚೆ ಆಗಿದೆ. ಇದನ್ನ ಹೈಕಮಾಂಡ್ ಗಮನಕ್ಕೆ ತರಬೇಕು ಎಂದು ಚರ್ಚೆ ಆಗಿದೆ. ಹಾದಿಬೀದಿಯಲ್ಲಿ ಮಾತಾಡುವವರು ಯಾರೇ ಇರಲಿ ಕ್ರಮ ಆಗಬೇಕು ಎಂದು ಚರ್ಚಿಸಲಾಗಿದೆ ಎಂದು ತಿಳಿಸಿದರು
ಯತ್ನಾಳ್ ವಿರುದ್ಧ ಕ್ರಮ ವಿಚಾರವಾಗಿ ಪ್ರತಿಕ್ರಿಯಿಸಿ, ಇದರ ಬಗ್ಗೆ ನಾನು ಈಗ ಬಹಿರಂಗ ಚರ್ಚೆ ಮಾಡಲ್ಲ. ಈಗಾಗಲೇ ಈ ವಿಚಾರ ವರಿಷ್ಠರ ಅಂಗಳದಲ್ಲಿದೆ. ಅವರೂ ಕೂಡಾ ಶಿಸ್ತು ಸಮಿತಿ ಎದುರು ಹಾಜರಾಗಿ ಬಂದಿದ್ದಾರೆ. ಬಾಲ್ ಹೈಕಮಾಂಡ್ ಅಂಗಳದಲ್ಲಿದೆ, ಹೈಕಮಾಂಡ್ ತೀರ್ಮಾನ ಮಾಡುತ್ತೆ. ಶಿಸ್ತು ಉಲ್ಲಂಘನೆ ಇನ್ನೂ ಮುಂದುವರೆಸಿದರೆ ಕಾರ್ಯಕರ್ತರಿಗೂ ಬೇಸರವಾಗಿದೆ. ಪಕ್ಷದ ಬೆಳವಣಿಗೆಗೂ ಒಳ್ಳೆಯದಲ್ಲ. ಯಾರೇ ಇದ್ದರೂ ಪಕ್ಷದ ಚೌಕಟ್ಟಿನಲ್ಲೇ ಚರ್ಚೆ ಮಾಡಬೇಕು. ಹಾದಿಬೀದಿಯಲ್ಲಿ ಮಾತನಾಡುವವರ ವಿರುದ್ಧ ಗಂಭೀರ ಕ್ರಮ ಆಗಬೇಕು. ಯತ್ನಾಳ್ ಮನಸ್ಸಲ್ಲಿ ಏನಿದೆ? ಅವರೇನು ಚರ್ಚೆ ಮಾಡುತ್ತಾರೆ ಎಂದು ಇವತ್ತಿನ ಸಭೆಯಲ್ಲಿ ಚರ್ಚೆ ಆಗಿಲ್ಲ. ಶಿಸ್ತು ಸಮಿತಿ ಮುಂದೆ ಅವರು ಉತ್ತರ ಕೊಟ್ಟು ಬಂದಿದ್ದಾರೆ. ಏನು ಕ್ರಮ ಆಗುತ್ತೆ ಎಂದು ಕಾದು ನೋಡೋಣ ಎಂದು ಹೇಳಿದರು.